ಪೌಷ್ಠಿಕ ಆಹಾರದ ಭಾಗವಾಗಿ ನಡೆದ ಕಾರ್ಯಕ್ರಮದಲ್ಲಿ ನೀಡಲಾಗಿದ್ದ ಬಿಸ್ಕೆಟ್ ತಿಂದು 80 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಬಾಜಿನಗರ ಜಿಲ್ಲೆಯ ಕೌನ್ಸಿಲ್ ಶಾಲೆಯಲ್ಲಿ ನಡೆದಿದೆ.
ವಿದ್ಯಾರ್ಥಿಗಳು ಪೌಷ್ಠಿಕ ಆಹಾರ ಕಾರ್ಯಕ್ರಮದ ಭಾಗವಾಗಿ ನೀಡಲಾಗಿದ್ದ ಬಿಸ್ಕೆಟ್ ಸೇವಿಸಿದ್ದರು. ಕೆಲ ಸಮಯದಲ್ಲಿ ಮಕ್ಕಳು ಅಸ್ವಸ್ಥರಾಗಿದ್ದಾರೆ. ಮಕ್ಕಳಲ್ಲಿ ವಾಂತಿ ಶುರುವಾಗಿದ್ದು, ಸುಮರು 80 ವಿದ್ಯಾರ್ಥಿಗಳು ಅನಾರೋಗ್ಯಕ್ಕೀಡಾಗಿದ್ದಾರೆ.
ಅಸ್ವಸ್ಥ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ವಿದ್ಯಾರ್ಥಿಗಳ ಆರೋಗ್ಯ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಸ್ಕೆಟ್ ಸೇವಿಸಿದ ವಿದ್ಯಾರ್ಥಿಗಳಲ್ಲಿ ವಿಷ ಆಹಾರದ ಲಕ್ಷಣಗಳು ಕಂಡು ಬಂದಿದೆ. ವಿದ್ಯಾರ್ಥಿಗಳಿಗೆ ಚಿಕಿತ್ಸೆ ಬಳಿಕ ಮನೆಗೆ ಕಳುಹಿಸಲಾಗಿದೆ. ತೀವ್ರ ಅನಾರೋಗ್ಯ ಕಂಡುಬಂದ 7 ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಛತ್ರಪತಿ ಸಂಬಾಜಿನಗರ ಸಿವಿಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಡಾ.ಬಾಬಾಸಾಹೇಬ ಘುಘೆ ತಿಳಿಸಿದ್ದಾರೆ.