ಬೆಂಗಳೂರು: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿ ಡಿವೈಎಸ್ ಪಿ ಶ್ರೀಧರ್ ಪೂಜಾರ್ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀದಲು ನಿರಾಕರಿಸಿದೆ.
ಶ್ರೀಧರ್ ಪೂಜಾರಿ ಸಲ್ಲಿಸಿದ್ದ ಅರ್ಜಿ ತೀರ್ಪು ಕಾಯ್ದಿರಿಸಿದ್ದ ಹೈಕೋರ್ಟ್, ಇದೀಗ ಜಾಮೀನು ನೀಡಲು ನಿರಾಕರಿಸಿ ಆದೇಶ ಹೊರಡಿಸಿದೆ.
ವಿಚಾರಣೆ ವೇಳೆ ಶ್ರೀಧರ್ ಪರ ವಕೀಲರು, ಶ್ರೀಧರ್ ವಿರುದ್ಧ ಪ್ರಕರಣ ದಾಖಲಾಗಿ ಒಂದು ವರ್ಷವಾಗಿದೆ. ಅವರು ಕ್ರಿಮಿನಲ್ ಅಲ್ಲ. ಡಿವೈಎಸ್ ಪಿ ಶ್ರೇಣಿಯ ಅಧಿಕಾರಿ. ಕನಿಷ್ಟ ಒಂದು ವಾರದ ಮಟ್ಟಿಗಾದರೂ ಮಧ್ಯಂತರ ಜಾಮೀನು ಮಂಜೂರು ಮಾಡುವಂತೆ ಕೋರಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಿಐಡಿ ವಿಶೇಷ ತನಿಖಾದಳ ಸರ್ಕಾರಿ ಅಭಿಯೋಜಕ ಪ್ರಸನ್ನ ಕುಮಾರ್, ಜಾಮೀನು ಅರ್ಜಿ ವಜಾಗೊಂದರೆ ಮಧ್ಯಂತರ ಜಾಮೀನು ರದ್ದಾಗಲಿದೆ ಎಂದು ಇತ್ತೀಚೆಗೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಇದೇ ಪ್ರಕರಣ ಇಲ್ಲಿಯೂ ಅನ್ವಯವಾಗಲಿದೆ ಹೀಗಾಗಿ ಮಧ್ಯಂತರ ಜಾಮೀನು ನೀಡಬಾರದು ಎಂದು ವಾದ ಮಂಡಿಸಿದ್ದರು. ಇದನ್ನು ಪುರಸ್ಕರಿಸಿದ ನ್ಯಾಯಾಲಯ ಶ್ರೀಧರ್ ಪೂಜಾರ್ ಗೆ ಜಾಮೀನು ನೀಡಲು ನಿರಾಕರಿಸಿದೆ.