ಬೆಂಗಳೂರು : ರಾಜ್ಯಾದ್ಯಂತ ಭಾರಿ ಸದ್ದು ಮಾಡಿದ್ದ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿ ಶ್ರೀಕಿ ಗರ್ಲ್ ಫ್ರೆಂಡ್ ಪೂಜಾ ಭಟ್ ಗೆ ಎಸ್ ಐ ಟಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಬಿಟ್ ಕಾಯಿನ್ ಹಗರಣದಲ್ಲಿ ಶ್ರೀಕಿ ಗರ್ಲ್ ಫ್ರೆಂಡ್ ಪೂಜಾ ಭಟ್ ಗೆ ಸಂಕಷ್ಟ ಎದುರಾಗಿದ್ದು, ತುರ್ತಾಗಿ ವಿಚಾರಣೆಗೆ ಹಾಜರಾಗುವಂತೆ ಎಸ್ ಐ ಟಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಶ್ರೀಕಿಯಿಂದ ಮನೆ, ಕಾರು ಪಡೆದ ಹಿನ್ನೆಲೆ ಪೂಜಾ ಭಟ್ ಗೆ ಎಸ್ ಐ ಟಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹ್ಯಾಕರ್ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನನ್ನು ಇತ್ತೀಚೆಗೆ ಸಿಐಡಿ ಬಂಧಿಸಿತ್ತು. ಹಗರಣದಲ್ಲಿ ರಾಜಕಾರಣಿಗಳು, ಹಿರಿಯ ಪೊಲೀಸ್ ಅಧಿಕಾರಿಗಳೂ ಭಾಗಿಯಾಗಿರುವ ಆರೋಪ ಕೇಳಿಬಂದಿತ್ತು. ಬಿಟ್ ಕಾಯಿನ್ ಹಗರಣದ ತನಿಖೆ ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳು ಇತ್ತೀಚೆಗೆ ಇನ್ಸ್ ಪೆಕ್ಟರ್ ಚಂದ್ರಾಧರ್ ಅವರನ್ನು ಬಂಧಿಸಿದ್ದರು. ಚಂದ್ರಾಧರ್ ಈ ಹಿಂದೆ ಬಿಟ್ ಕಾಯಿನ್ ಹಗರಣದ ತನಿಖೆ ನಡೆಸಿದ್ದರು. ಸೈಬರ್ ಕ್ರೈಂ ಠಾಣೆ ಇನ್ಸ್ ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.