ಬೆಂಗಳೂರು: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಮೊದಲ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. 2015ರಲ್ಲಿ ಕೆಂಪೇಗೌಡ ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
ಕೆ.ಜಿ ನಗರ ಠಾಣೆಯಲ್ಲಿ ಡ್ರಗ್ಸ್ ಕೇಸ್ ನಲ್ಲಿ ಶ್ರೀಕಿಯನ್ನು ಬಂಧಿಸಲಾಗಿತ್ತು. ಈ ಪ್ರಕರಣ ತನಿಖೆ ನಡೆಸುತ್ತಿದ್ದ ವೇಳೆ ಬಿಟ್ ಕಾಯಿನ್ ಹಗರಣ ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಎಸ್ಐಟಿಯಿಂದ ಮೊದಲ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
ಪ್ರಕರಣದಲ್ಲಿ ಶ್ರೀಕಿ, ರಾಬಿನ್ ಖಂಡೇವಾಲಾ, ಹಾಗೂ ಸುನೀಶ್ ಹೆಗ್ಡೆ ಸೇರಿ ಒಟ್ಟು 6 ಜನರ ವಿರುದ್ಧ ಮೊದಲನೇ ಎಸಿಎಂಎಂ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.