ಬೆಂಗಳೂರು : ಬಿಟ್ ಕಾಯಿನ್ ಅಕ್ರಮ ಪ್ರಕರಣದಲ್ಲಿ ಬಂಧಿತರಾದ ಪೊಲೀಸ್ ಅಧಿಕಾರಿಗಳಿಗೆ 6 ದಿನ ಸಿಐಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಇಂದು ವಿಚಾರಣೆ ನಡೆಸಿದ ಬೆಂಗಳೂರಿನ 1 ನೇ ಎಸಿಎಂಎಂ ಕೋರ್ಟ್ ಬಂಧಿತ ಅಧಿಕಾರಿಗಳನ್ನು 6 ದಿನ ಸಿಐಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಬಂಧಿತರನ್ನು ಇನ್ಸ್ಪೆಕ್ಟರ್ ಪ್ರಶಾಂತ್ ಬಾಬು ಮತ್ತು ಸಂತೋಷ್ ಎಂದು ಗುರುತಿಸಲಾಗಿದೆ. ಸಾಕ್ಷ್ಯ ನಾಶ ಮಾಡಿದ ಇಬ್ಬರನ್ನು ಬಂಧಿಸಲಾಗಿತ್ತು. ಇಬ್ಬರು ಆರೋಪಿಗಳನ್ನು ಎಸ್ ಐ ಟಿ ಅಧಿಕಾರಿಗಳು ಇಂದು ಕೋರ್ಟ್ ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ 6 ದಿನ ಸಿಐಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಶ್ರೀಕಿಯನ್ನು 90 ದಿನ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದರು . ಸಿಸಿಬಿ ಬಂಧನದಲ್ಲಿದ್ದಾಗ ಬಿಟ್ ಕಾಯಿನ್ ಅಕ್ರಮ ಆಗಿರೋದು ಸಾಬೀತಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ.