ಬೆಂಗಳೂರು: ರಾಜ್ಯಾದ್ಯಂತ ಭಾರಿ ಸದ್ದು ಮಾಡಿದ್ದ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಇನ್ಸ್ ಪೆಕ್ಟರ್ ಓರ್ವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಬಿಟ್ ಕಾಯಿನ್ ಹಗರಣದ ತನಿಖೆ ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳು, ಇನ್ಸ್ ಪೆಕ್ಟರ್ ಚಂದ್ರಾಧರ್ ಅವರನ್ನು ಬಂಧಿಸಿದ್ದಾರೆ. ಚಂದ್ರಾಧರ್ ಈ ಹಿಂದೆ ಬಿಟ್ ಕಾಯಿನ್ ಹಗರಣದ ತನಿಖೆ ನಡೆಸಿದ್ದರು. ಸೈಬರ್ ಕ್ರೈಂ ಠಾಣೆ ಇನ್ಸ್ ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.
ಚಂದ್ರಾಧರ್ ಅವರನ್ನು ಸುದೀರ್ಘ ವಿಚಾರಣೆ ನಡೆಸಿದ್ದ ಸಿಐಡಿ, ಇದಿಗ ಅವರನ್ನು ಬಂಧಿಸಿದೆ. ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹ್ಯಾಕರ್ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನನ್ನು ಇತ್ತೀಚೆಗೆ ಸಿಐಡಿ ಬಂಧಿಸಿತ್ತು. ಹಗರಣದಲ್ಲಿ ರಾಜಕಾರಣಿಗಳು, ಹಿರಿಯ ಪೊಲೀಸ್ ಅಧಿಕಾರಿಗಳೂ ಭಾಗಿಯಾಗಿರುವ ಆರೋಪ ಕೇಳಿಬಂದಿತ್ತು.