alex Certify ಹಾರುತ್ತಿದ್ದ ನವಿಲು ಬಡಿದು ಬೈಕ್​ ಸವಾರ ಸಾವು….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾರುತ್ತಿದ್ದ ನವಿಲು ಬಡಿದು ಬೈಕ್​ ಸವಾರ ಸಾವು….!

ನಮ್ಮ ದೇಶದ ರಸ್ತೆಗಳ ಕಳಪೆ ಗುಣಮಟ್ಟದ ಬಗ್ಗೆ ಮಾತನಾಡುವ ಹಾಗೆಯೇ ಇಲ್ಲ. ದೇಶದಲ್ಲಿ ಪ್ರತಿ ವರ್ಷ ರಸ್ತೆ ಅಪಘಾತದಿಂದಲೇ ಅತೀ ಹೆಚ್ಚು ಮಂದಿ ಸಾವನ್ನಪ್ಪುತ್ತಾರೆ. ಕೇರಳದ ತ್ರಿಶೂರ್​​ನ ಅಯ್ಯಂತೋಳೆ ಎಂಬಲ್ಲಿ ಹಾರುತ್ತಿದ್ದ ನವಿಲೊಂದು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್​ ಸವಾರ ಸಾವನ್ನಪ್ಪಿದ ದಾರುಣ ಘಟನೆ ವರದಿಯಾಗಿದೆ. ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೃತ ವ್ಯಕ್ತಿಯನ್ನು 34 ವರ್ಷದ ಪ್ರಮೋಶ್​ ಎಂದು ಗುರುತಿಸಲಾಗಿದೆ. ಪತ್ನಿಯನ್ನು ರೈಲ್ವೆ ನಿಲ್ದಾಣಕ್ಕೆ ಬಿಡಲು ಬೈಕ್​ನಲ್ಲಿ ಸವಾರಿ ಮಾಡುತ್ತಿದ್ದ ವೇಳೆ ಈ ಅವಘಢ ಸಂಭವಿಸಿದೆ. ನವಿಲು ಬಡಿದ ಪರಿಣಾಮ ಪ್ರಮೋಶ್​ ಬೈಕ್​ ಮೇಲಿನ ನಿಯಂತ್ರಣವನ್ನು ಕಳೆದುಕೊಂಡಿದ್ದಾರೆ. ಪರಿಣಾಮವಾಗಿ ಪತಿ – ಪತ್ನಿಯಿಬ್ಬರೂ ರಸ್ತೆ ಮೇಲೆ ಬಿದ್ದಿದ್ದಾರೆ.

ಗಾಯಗೊಂಡಿದ್ದ ಇಬ್ಬರನ್ನೂ ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಪ್ರಮೋಶ್​ ಸಾವನ್ನಪ್ಪಿದ್ದಾರೆ. ಪತ್ನಿಯ ಸ್ಥಿತಿ ಗಂಭೀರವಾಗಿದೆ. ಈ ದಂಪತಿ 6 ತಿಂಗಳ ಹಿಂದಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು ಎನ್ನಲಾಗಿದೆ.

ಅಂದಹಾಗೆ ಈ ಅಪಘಾತದಲ್ಲಿ ನವಿಲು ಕೂಡ ಸಾವನ್ನಪ್ಪಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...