ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಬಿಜೆಪಿಯಲ್ಲಿ ಯಾವುದು ಶಾಶ್ವತ ಅಲ್ಲ. ಕಾಲಕಾಲಕ್ಕೆ ಎಲ್ಲವೂ ಬದಲಾವಣೆಯಾಗುತ್ತಿರುತ್ತದೆ ಎಂದು ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ಮಾತನಾಡಿದ ಸಿ.ಟಿ. ರವಿ, ನಾನು ಯಾವುದೇ ಹುದ್ದೆಯ ಆಕಾಂಕ್ಷಿ ಅಲ್ಲ, ಪಕ್ಷದ ಸಾಮಾನ್ಯ ಕಾರ್ಯಕರ್ತ. ಪಕ್ಷ ನೀಡುವ ಯಾವುದೇ ಜವಾಬ್ದಾರಿಗೆ ನಾನು ಬದ್ಧ. ಇಲ್ಲಿ ಯಾವುದೂ ಶಾಶ್ವತ ಅಲ್ಲ ಎಂದು ಹೇಳಿದರು.
ಇದೇ ವೇಳೆ ಚಂದ್ರು ಹತ್ಯೆ ಪ್ರಕರಣ ಸಂಬಂಧ ಗೃಹ ಸಚಿವ ಅರಗ ಜ್ಞಾನೇಂದ್ರ ನೀಡಿದ್ದ ಹೇಳಿಕೆ ವಿಚಾರವಾಗಿ ಮಾತನಾಡಿದ ಸಿ.ಟಿ. ರವಿ, ಚಂದ್ರು ತಾಯಿ ಮಾತು ಕೇಳಿದರೆ ಹತ್ಯೆಯ ಹಿಂದೆ ಭಾಷೆಯ ಕೈವಾಡವೂ ಇದೆ ಎನಿಸುತ್ತದೆ ಎಂದಿದ್ದಾರೆ.