2018ರಲ್ಲಿ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ಆಯ್ಕೆಯಾಗಿದ್ದ ಬಿಜೆಪಿ ನಾಯಕಿ ಉಮಾ ಭಾರತಿ ಸಹೋದರನ ಪುತ್ರ ರಾಹುಲ್ ಸಿಂಗ್ ಲೋದಿ ಅವರಿಗೆ ಹೈಕೋರ್ಟ್ ಶಾಕ್ ನೀಡಿದೆ.
ನಾಮಪತ್ರ ಸಲ್ಲಿಕೆ ವೇಳೆ ತಪ್ಪು ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ಅವರ ಆಯ್ಕೆಯನ್ನು ಮಧ್ಯಪ್ರದೇಶ ಹೈಕೋರ್ಟ್ ಅಸಿಂಧುಗೊಳಿಸಿದ್ದು, ಈ ಚುನಾವಣೆಯಿಂದ ಅವರಿಗೆ ಲಭ್ಯವಾಗುವ ಯಾವುದೇ ಅನುಕೂಲಗಳನ್ನು ಪಡೆಯಲು ಅವಕಾಶ ನೀಡಬಾರದು ಎಂದು ಆದೇಶಿಸಲಾಗಿದೆ.
ರಾಹುಲ್ ಸಿಂಗ್ ಲೋದಿ ಖರಗ್ ಪುರ ಕ್ಷೇತ್ರದಿಂದ ವಿಧಾನಸಭೆ ಆಯ್ಕೆಯಾಗಿದ್ದು, ಇದನ್ನು ಪ್ರಶ್ನಿಸಿ ಎದುರಾಳಿ ಅಭ್ಯರ್ಥಿ ಕಾಂಗ್ರೆಸ್ ನ ಚಂದಾ ಸಿಂಗ್ ಗೌರ್ ತಕರಾರು ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಾಲಯ ರಾಹುಲ್ ಸಿಂಗ್ ಅವರ ಆಯ್ಕೆಯನ್ನು ಅಸಿಂಧುಗೊಳಿಸಿದೆ.