alex Certify BJP ನಾಯಕಿ ಉಮಾ ಭಾರತಿ ಸಹೋದರ ಪುತ್ರನ ಶಾಸಕ ಸ್ಥಾನಕ್ಕೆ ಕುತ್ತು; ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BJP ನಾಯಕಿ ಉಮಾ ಭಾರತಿ ಸಹೋದರ ಪುತ್ರನ ಶಾಸಕ ಸ್ಥಾನಕ್ಕೆ ಕುತ್ತು; ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ

2018ರಲ್ಲಿ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ಆಯ್ಕೆಯಾಗಿದ್ದ ಬಿಜೆಪಿ ನಾಯಕಿ ಉಮಾ ಭಾರತಿ ಸಹೋದರನ ಪುತ್ರ ರಾಹುಲ್ ಸಿಂಗ್ ಲೋದಿ ಅವರಿಗೆ ಹೈಕೋರ್ಟ್ ಶಾಕ್ ನೀಡಿದೆ.

ನಾಮಪತ್ರ ಸಲ್ಲಿಕೆ ವೇಳೆ ತಪ್ಪು ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ಅವರ ಆಯ್ಕೆಯನ್ನು ಮಧ್ಯಪ್ರದೇಶ ಹೈಕೋರ್ಟ್ ಅಸಿಂಧುಗೊಳಿಸಿದ್ದು, ಈ ಚುನಾವಣೆಯಿಂದ ಅವರಿಗೆ ಲಭ್ಯವಾಗುವ ಯಾವುದೇ ಅನುಕೂಲಗಳನ್ನು ಪಡೆಯಲು ಅವಕಾಶ ನೀಡಬಾರದು ಎಂದು ಆದೇಶಿಸಲಾಗಿದೆ.

ರಾಹುಲ್ ಸಿಂಗ್ ಲೋದಿ ಖರಗ್ ಪುರ ಕ್ಷೇತ್ರದಿಂದ ವಿಧಾನಸಭೆ ಆಯ್ಕೆಯಾಗಿದ್ದು, ಇದನ್ನು ಪ್ರಶ್ನಿಸಿ ಎದುರಾಳಿ ಅಭ್ಯರ್ಥಿ ಕಾಂಗ್ರೆಸ್ ನ ಚಂದಾ ಸಿಂಗ್ ಗೌರ್ ತಕರಾರು ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಾಲಯ ರಾಹುಲ್ ಸಿಂಗ್ ಅವರ ಆಯ್ಕೆಯನ್ನು ಅಸಿಂಧುಗೊಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...