ಮೈಸೂರು: ಬಿಜೆಪಿ ಮುಖಂಡ ಅಪ್ಪಣ್ಣ ವಿರುದ್ಧ ವಂಚನೆ ಆರೋಪ ಮಾಡಿರುವ ಉದ್ಯಮಿಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಗಣೇಶ್ ನಗರದ ನಿವಾಸಿ ಉದ್ಯಮಿ ಶರತ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್ ನಲ್ಲಿ ಬಿಜೆಪಿ ಮುಖಂಡ, ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್ ಅಧ್ಯಕ್ಷ ಅಪ್ಪಣ್ಣ ಹಾಗೂ ಪ್ರವೀಣ್ ಎಂಬುವರು ವಂಚಿಸಿದ್ದಾಗಿ ಆರೋಪಿಸಿದ್ದಾರೆ.
ಸೋಲಾರ್ ಕಂಪನಿಗೆ ಹೂಡಿಕೆ ಮಾಡುವುದಾಗಿ ಹೇಳಿ ಬಿಜೆಪಿ ಮುಖಂಡ ಅಪ್ಪಣ್ಣ ತನ್ನಿಂದ 8 ಲಕ್ಷ ರೂಪಾಯಿ ಸಾಲ ಪಡೆದುಕೊಂಡು ವಂಚಿಸಿದ್ದಾರೆ. ಮತ್ತೊಂದೆಡೆ ಪ್ರವೀಣ್ ಎಂಬಾತ ಪಾಲುದಾರಿಕೆಯಲ್ಲಿಯೂ ವಂಚನೆ ಮಾಡಿದ್ದಾನೆ. ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಉದ್ಯಮಿ ಶರತ್ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ.
ಎನ್ ಆರ್ ಪೊಲೀಸ್ ಠಾಣೆಯಲ್ಲಿ ಅಪ್ಪಣ್ಣ ಹಾಗೂ ಪ್ರವೀಣ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.