
ಬೆಂಗಳೂರು: ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ಬಿಜೆಪಿಯ 18 ಶಾಸಕರನ್ನು ವಿಧಾನಸಭೆಯಿಂದ ಅಮಾನತುಗೊಳಿಸಿ ಸ್ಪೀಕರ್ ಯು.ಟಿ.ಖಾದರ್ ಆದೇಶ ಹೊರಡಿಸಿದ್ದಾರೆ.
ವಿಧಾನಸಭೆಯ ಕಲಾಪದ ವೇಳೆ ಬಿಜೆಪಿ ಶಾಸಕರು ವಿಧೇಯಕಗಳನ್ನು ಹರಿದು ಸ್ಪೀಕರ್ ಮೇಲೆ ಎಸೆದು ಗಲಾಟೆ ಎಬ್ಬಿಇಸಿದ್ದರು. ಅಲ್ಲದೇ ಸಿಡಿ ಪ್ರದರ್ಶನ ಮಾಡಿ ಗದ್ದಲ-ಕೋಲಾಹಲವೆಬ್ಬಿಸಿದ್ದರು. ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಕಾರಣಕ್ಕೆ 6 ತಿಂಗಳ ಕಾಲ ಬಿಜೆಪಿ 18 ಶಾಸಕರನ್ನು ವಿಧಾನಸಭೆಯಿಂದ ಅಮಾನತುಗೊಳಿಸಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಸ್ಪೀಕರ್ ಯು.ಟಿ.ಖಾದರ್ ಆದೇಶ ಹೊರಡಿಸಿದ್ದಾರೆ.
ಸ್ಪೀಕರ್ ಆದೇಶದ ಬಳಿಕ ಕೂಡಲೇ ವಿಧಾನಸಭೆಯಿಂದ 18 ಶಾಸಕರು ಹೊರ ಹೋಗುವಂತೆ ಸೂಚಿಸಲಾಗಿದೆ. ಬಳಿಕ ಕಲಾಪವನ್ನು ಮುಂದೂಡಲಾಯಿತು. ಕಲಾಪ ಮುಂದೂಡುತ್ತಿದ್ದಂತೆಯೇ ಬಿಜೆಪಿ ಸದಸ್ಯರು ಶಾಸಕರ ಅಮಾನತು ವಿಚಾರವನ್ನು ರಾಜ್ಯಪಾಲರಿಗೆ ತಿಳಿಸಲು ಮುಂದಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರು ವಿಧಾನಸೌಧದಿಂದ ರಾಜಭವನದತ್ತ ತೆರಳಿದ್ದು, ಶಾಸಕರ ಅಮಾನತು ವಿಚಾರ ರಾಜ್ಯಪಾಲರ ಅಂಗಳ ತಲುಪಿದೆ.