
ಪ್ರತಿಭಟನಾನಿರತ ಸಂಸದರು ಅಹಿಂಸಾ ತತ್ವವನ್ನು ಪ್ರತಿಪಾದಿಸುತ್ತಿದ್ದ ಮಹಾತ್ಮ ಗಾಂಧಿಯವರ ಪ್ರತಿಮೆ ಎದುರು ಮಾಂಸ ಸೇವನೆ ಮಾಡಿದ್ದಾರೆ. ಇವರುಗಳು ತಂದೂರಿ ಚಿಕನ್ ಸೇವಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ ಎಂದು ಬಿಜೆಪಿ ಆರೋಪಿಸಿದೆ.
ಆದರೆ ಬಿಜೆಪಿಯ ಈ ಆರೋಪವನ್ನು ತಳ್ಳಿ ಹಾಕಿರುವ ಟಿಎಂಸಿ ಸಂಸದೆ ಸುಶ್ಮಿತಾ ದೇವ್, ತಮ್ಮ ಆಡಳಿತ ವೈಫಲ್ಯವನ್ನು ಮುಚ್ಚಿಕೊಳ್ಳಲು ಬಿಜೆಪಿ ನಾಯಕರು ಮತ್ತು ಮಂತ್ರಿಗಳು ಇಂತಹ ಅಪಪ್ರಚಾರ ಮಾಡುತ್ತಿದ್ದಾರೆ. ಮುಚ್ಚಿದ ಬಾಗಿಲಿನ ಹಿಂದೆ ಆರ್ ಎಸ್ ಎಸ್ ನವರು ಮತ್ತು ಸಚಿವರು ಏನೆಲ್ಲಾ ತಿನ್ನುತ್ತಾರೆ ಎಂಬುದು ನಮಗೆ ತಿಳಿದಿದೆ. ಹಾಗಾಗಿ ನಮ್ಮ ಆಹಾರದ ಬಗ್ಗೆ ಮಾತನಾಡುವುದು ಬೇಕಿಲ್ಲ ಎಂದು ಟಾಂಗ್ ನೀಡಿದ್ದಾರೆ.