
ಬೆಂಗಳೂರು: ಬೆಂಗಳೂರಿನಲ್ಲಿ ಬಿಜೆಪಿಗೆ ಮತ್ತೊಂದು ಬಂಡಾಯದ ಬಿಸಿ ತಟ್ಟಿದೆ. ಗಾಂಧಿನಗರ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಮಾಜಿ ಸಚಿವ ಮಾಲೂರು ಕೃಷ್ಣಯ್ಯ ಶೆಟ್ಟಿ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.
ಯಡಿಯೂರಪ್ಪ ಆಪ್ತ ಬಳಗದಲ್ಲಿ ಕೃಷ್ಣಯ್ಯ ಶೆಟ್ಟಿ ಗುರುತಿಸಿಕೊಂಡಿದ್ದರು. ಗಾಂಧಿನಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಗಾಂಧಿನಗರ ಕ್ಷೇತ್ರಕ್ಕೆ ಬಿಜೆಪಿಯಿಂದ ಸಪ್ತಗಿರಿ ಗೌಡ ಅವರಿಗೆ ಟಿಕೆಟ್ ನೀಡಲಾಗಿದೆ. ಟಿಕೆಟ್ ಕೈತಪ್ಪಿದ್ದರಿಂದ ಬೇಸತ್ತು ಕೃಷ್ಣಯ್ಯ ಶೆಟ್ಟಿ ನಾಳೆ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.