
ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಬಿಜೆಪಿ ಪ್ರಭಾರಿಗಳು, ಸಹ ಪ್ರಭಾರಿಗಳನ್ನು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇಮಕ ಮಾಡಿದ್ದಾರೆ.
ಈಶಾನ್ಯ ಪದವೀಧರ ಕ್ಷೇತ್ರಕ್ಕೆ ವಿಧಾನ ಪರಿಷತ್ ಮುಖ್ಯ ಸಚೇತಕ ಎನ್. ರವಿಕುಮಾರ್ ಪ್ರಭಾರಿಯಾಗಿದ್ದಾರೆ. ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಪ್ರಭಾರಿಯಾಗಿದ್ದು, ರಾಜ್ಯ ಕಾರ್ಯದರ್ಶಿ ಡಿ.ಎಸ್. ಅರುಣ್ ಸಹಪ್ರಭಾರಿಯಾಗಿದ್ದಾರೆ.
ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥ್ ನಾರಾಯಣ, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ರಾಜ್ಯ ಉಪಾಧ್ಯಕ್ಷ ಎಂ. ರಾಜೇಂದ್ರ ಅವರನ್ನು ಪ್ರಭಾರಿಯಾಗಿ ನೇಮಕ ಮಾಡಲಾಗಿದೆ.
