alex Certify BREAKING: ಬಿಜೆಪಿ ಅಚ್ಚರಿ ನಿರ್ಧಾರ, ಮೊದಲ ಬಾರಿ ಶಾಸಕರಾದ ಭೂಪೇಂದ್ರಗೆ ಒಲಿದು ಬಂದ ಸಿಎಂ ಹುದ್ದೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬಿಜೆಪಿ ಅಚ್ಚರಿ ನಿರ್ಧಾರ, ಮೊದಲ ಬಾರಿ ಶಾಸಕರಾದ ಭೂಪೇಂದ್ರಗೆ ಒಲಿದು ಬಂದ ಸಿಎಂ ಹುದ್ದೆ

ಗಾಂಧಿನಗರ: ಗುಜರಾತ್ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ ಗುಜರಾತ್ ಸಿಎಂ ಸ್ಥಾನಕ್ಕೆ ಅಚ್ಚರಿ ಹೆಸರನ್ನು ಬಿಜೆಪಿ ಘೋಷಿಸಿದೆ.

2017 ರಲ್ಲಿ ಮೊದಲ ಬಾರಿಗೆ ಭೂಪೇಂದ್ರ ಪಟೇಲ್ ಘಟ್ಲೋಡಿಯಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅವರು ಬರೋಬ್ಬರಿ 1,17,000 ಮತಗಳ ಅಂತರದಿಂದ ಜಯಗಳಿಸಿದ್ದರು. ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಭೂಪೇಂದ್ರ ಪಟೇಲ್ ಅವರು ಗುಜರಾತ್ ನ 17ನೇ ಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

1.17 ಲಕ್ಷ ಮತಗಳ ಅಂತರದಿಂದ ಆನಂದಿಬೆನ್ ಅವರ ಘಟ್ಲೋಡಿಯಾ ಕ್ಷೇತ್ರದಿಂದ ಜಯಗಳಿಸಿದ್ದ ಭೂಪೇಂದ್ರ ಪಟೇಲ್ ಇಂಜಿನಿಯರಿಂಗ್ ಪದವೀಧರರಾಗಿದ್ದಾರೆ. ಪಟೇಲ್ ಸಮುದಾಯಕ್ಕೆ ಬಿಜೆಪಿ ಮಣೆ ಹಾಕಿದೆ. ನಿರ್ಗಮಿತ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಭೂಪೆಂದ್ರ ಪಟೇಲ್ ಅವರ ಹೆಸರನ್ನು ಸೂಚಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...