
ಶಿವಮೊಗ್ಗದ ಅಶೋಕ ನಗರದಲ್ಲಿ ಬಿಜೆಪಿ ಬೂತ್ ಕಮಿಟಿ ಅಧ್ಯಕ್ಷರಾಗಿದ್ದ ಎಲ್. ಶೇಖರ್ ಆಗಸ್ಟ್ 25ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇದ್ದರೂ ಸಹ ಅಗತ್ಯ ವಸ್ತುಗಳ ಬೆಲೆ ಇಳಿಸುವಲ್ಲಿ ವಿಫಲವಾಗಿದೆ ಎಂಬ ಕಾರಣಕ್ಕೆ ಶಂಕರ್ ರಾಜೀನಾಮೆ ಸಲ್ಲಿಸಿದ್ದಾರೆ.
ಜನರಿಗಾಗಿ ಕೆಲಸ ಮಾಡುವಲ್ಲಿ ಬಿಜೆಪಿಯು ವಿಫಲವಾಗಿದೆ. ಆಹಾರ ಧಾನ್ಯಗಳು, ಎಲ್ಪಿಜಿ, ವಿದ್ಯುತ್, ಪೆಟ್ರೋಲ್, ಡಿಸೇಲ್ ಸೇರಿದಂತೆ ಬಹುತೇಕ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆ ಕಂಡಿದೆ. ಇದರಿಂದ ಜನರು ಕಷ್ಟ ಅನುಭವಿಸುತ್ತಿದ್ದಾರೆ ಎಂದು ರಾಜೀನಾಮೆ ಪತ್ರದಲ್ಲಿ ಶೇಖರ್ ಬರೆದುಕೊಂಡಿದ್ದಾರೆ.