ಕೋಲಾರ: ಮಾಲೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮರು ಮತ ಎಣಿಕೆ ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ವೈ. ನಂಜೇಗೌಡ ಅವರ ವಿರುದ್ಧ ಕೇವಲ 248 ಮತಗಳ ಅಂತರದಿಂದ ಸೋಲು ಕಂಡಿರುವ ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ಮರುಮತ ಎಣಿಕೆ ಕೋರಿ ಮಂಗಳವಾರ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಮತ ಎಣಿಕೆ ಮುಗಿದ ನಂತರ ಕರೆ ಮಾಡಿದ್ದ ಚುನಾವಣಾ ಅಧಿಕಾರಿಗಳು ನೀವು ಗೆಲುವು ಸಾಧಿಸಿದ್ದೀರಿ ಎಂದು ತಿಳಿಸಿದ್ದರು. ನಂತರ ಕೆ.ವೈ. ನಂಜೇಗೌಡ 248 ಮತಗಳ ಅಂತರದಿಂದ ಜಯಗಳಿಸಿರುವುದಾಗಿ ಘೋಷಿಸಿದರು. ಇದು ಸಂಶಯಕ್ಕೆ ಕಾರಣವಾಗಿದ್ದು, ಈ ಹಿನ್ನೆಲೆಯಲ್ಲಿ ಮರುಮತ ಎಣಿಕೆ ಕೋರಿ ಮಂಜುನಾಥಗೌಡ ಹೈಕೋರ್ಟ್ ಮೊರೆ ಹೋಗಿದ್ದಾರೆ ಎಂದು ಹೇಳಲಾಗಿದೆ.