ಪಶ್ಚಿಮ ಬಂಗಾಳದ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಆಡಳಿತರೂಢ ಟಿಎಂಸಿ ಎಲ್ಲಾ ಕ್ಷೇತ್ರಗಳಲ್ಲಿಯೂ ಜಯಗಳಿಸಿದೆ. ಬಿಜೆಪಿ ಅಭ್ಯರ್ಥಿಗಳು 3 ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡಿದ್ದಾರೆ ಎಂದು ಟಿಎಂಸಿ ರಾಜ್ಯಸಭೆ ಸದಸ್ಯ ಡರೇಕ್ ಒಬ್ರಿಯಾನ್ ಹೇಳಿದ್ದಾರೆ.
ಬಿಜೆಪಿ ಅಭ್ಯರ್ಥಿಗಳು ಮೂರು ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡಿದ್ದಾರೆ. ಕ್ಷೇತ್ರದಲ್ಲಿ ಚಲಾವಣೆಯಾದ ಒಟ್ಟು ಮತಗಳ ಆರನೇ ಒಂದು ಭಾಗಕ್ಕಿಂತ ಕಡಿಮೆ ಮತಗಳನ್ನು ಪಡೆದ ಅಭ್ಯರ್ಥಿಗಳಿಗೆ ಚುನಾವಣಾ ಆಯೋಗ ಭದ್ರತಾ ಠೇವಣಿಯನ್ನು ಹಿಂತಿರುಗಿಸುವುದಿಲ್ಲ.
4 ಕ್ಷೇತ್ರದ ಉಪಚುನಾವಣೆಯಲ್ಲಿ ಟಿಎಂಸಿ ಜಯಗಳಿಸಿದ್ದು, ಎರಡು ಮತ್ತು ಮೂರನೇ ಸ್ಥಾನಕ್ಕಾಗಿ ಬಿಜೆಪಿ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ನಡುವೆ ನೆಕ್ ಟು ನೆಕ್ ಫೈಟ್ ನಡೆದಿದೆ ಎಂದು ಒಬ್ರಿಯಾನ್ ತಿಳಿಸಿದ್ದಾರೆ.
ಮೇ ತಿಂಗಳಲ್ಲಿ ನಡೆದ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ದಿನ್ಹತಾ ಕ್ಷೇತ್ರದಲ್ಲಿ ಬಿಜೆಪಿ ಎದುರು ಸೋತಿದ್ದ ಟಿಎಂಸಿ ಈ ಉಪಚುನಾವಣೆಯಲ್ಲಿ ಬಿಜೆಪಿಗಿಂತ 1.5 ಲಕ್ಷ ಮತಗಳ ಅಂತರದಿಂದ ಜಯಗಳಿಸಿದೆ.