
ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಕೈಗೊಂಡಿರುವ ಜನಸಂಕಲ್ಪ ಯಾತ್ರೆ ಇಂದಿನಿಂದ ಮತ್ತೆ ಆರಂಭವಾಗಲಿದೆ.
ಮೂರನೇ ಹಂತದ ಜನಸಂಕಲ್ಪ ಯಾತ್ರೆ ಮೂರು ದಿನ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಜನಸಂಕಲ್ಪ ಯಾತ್ರೆ ಮತ್ತೆ ಆರಂಭವಾಗಲಿದೆ. ಉಡುಪಿ ಜಿಲ್ಲೆಯ ಕಾಪು ಮತ್ತು ಬೈಂದೂರು ವಿಧಾನಸಭಾ ಕ್ಷೇತ್ರಗಳಲ್ಲಿ ಯಾತ್ರೆ ನಡೆಯಲಿದೆ.
ಡಿಸೆಂಬರ್ ಅಂತ್ಯದವರೆಗೂ ಜನಸಂಕಲ್ಪ ಯಾತ್ರೆ ಮುಂದುವರೆಯಲಿದ್ದು, ನ. 20ರಂದು ಬಳ್ಳಾರಿಯಲ್ಲಿ ಎಸ್‌ಟಿ ಸಮಾವೇಶ, ನ. 30ರಂದು ಮೈಸೂರಿನಲ್ಲಿ ಎಸ್ಸಿ ಸಮಾವೇಶ ನಡೆಸಲು ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ.
ಇಂದಿನಿಂದ ಉಡುಪಿ, ಹಾವೇರಿ, ಗದಗ, ಬೆಳಗಾವಿ ಜಿಲ್ಲೆಗಳಲ್ಲಿ ಜನಸಂಕಲ್ಪ ಯಾತ್ರೆ ಸಮಾವೇಶ ನಡೆಯಲಿದೆ. ನ. 11 ರಂದು ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಲಿದ್ದು, ಸಮಾವೇಶದ ಯಶಸ್ಸಿಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗ್ತಿದೆ ಎಂದು ಸಿಎಂ ತಿಳಿಸಿದ್ದಾರೆ.