ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಯುಟರ್ನ್ ನೀಡಿದ್ದಾರೆ.
ಹೈಕಮಾಂಡ್ ಸಂದೇಶಕ್ಕೆ ಬದ್ಧವೆಂದು ಹೇಳಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಯುಟರ್ನ್ ತೆಗೆದುಕೊಂಡಿದ್ದಾರೆ. ಅನಿಶ್ಚಿತತೆಯ ಹೊತ್ತಲ್ಲೇ ಉತ್ತರ ಕನ್ನಡ ಜಿಲ್ಲೆಗೆ ಪ್ರವಾಸ ಕೈಗೊಂಡಿದ್ದಾರೆ. ಇಂದು ಸಂಜೆ ಹೈಕಮಾಂಡ್ ಸಂದೇಶ ಬರಲಿದೆ ಎಂದು ಹೇಳಿದ್ದ ಸಿಎಂ ಮಧ್ಯಾಹ್ನದವರೆಗೂ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದರು. ಬೆಳಗಾವಿ ಪ್ರವಾಸದಲ್ಲಿದ್ದ ಸಂದರ್ಭದಲ್ಲಿಯೇ ಅವರು ನಾಳೆ ಕಾರವಾರ ಜಿಲ್ಲೆಗೆ ಹೋಗಿ ಬರುತ್ತೇನೆ ಎಂದು ಹೇಳಿದ್ದಾರೆ.
ನಾಳೆ ಮಧ್ಯಾಹ್ನದ ನಂತರ ಸಮಯವನ್ನು ಕಾಯ್ದಿರಿಸಿದ್ದ ಸಿಎಂ ರಾಜೀನಾಮೆ ನೀಡಬಹುದೆಂದು ಹೇಳಲಾಗಿತ್ತು. ಆದರೆ, ದಿಢೀರ್ ಬೆಳವಣಿಗೆಯಲ್ಲಿ ಅವರು ಕಾರವಾರ ಪ್ರವಾಸ ಕೈಗೊಂಡಿದ್ದಾರೆ. ಈ ಮೂಲಕ ರಾಜೀನಾಮೆ ಲೆಕ್ಕಾಚಾರವನ್ನು ಉಲ್ಟಾಪಲ್ಟಾ ಮಾಡಿದ್ದಾರೆ.
ಸಿ.ಟಿ. ರವಿ ಹೇಳಿಕೆಗೆ ತಿರುಗೇಟು ನೀಡಿದ ಅವರು, ರವಿ ಹೇಳಿದ್ದು ನೂರಕ್ಕೆ ನೂರರಷ್ಟು ಸತ್ಯವಾಗಿದೆ. ಎಲ್ಲರೂ ಹೈಕಮಾಂಡ್ ಮಾತು ಕೇಳುತ್ತಾರೆ ಎಂದಿದ್ದಾರೆ. ಇದರೊಂದಿಗೆ ಅವರು ನಾಳೆ ಪ್ರವಾಸ ಕೂಡ ಕೈಗೊಂಡಿರುವುದರಿಂದ ಯಡಿಯೂರಪ್ಪ ರಾಜೀನಾಮೆ ಪ್ರಹಸನಕ್ಕೆ ಬ್ರೇಕ್ ಬಿದ್ದಿದೆ.