alex Certify BREAKING: ಜಮ್ಮು ಕಾಶ್ಮೀರದಲ್ಲಿ ‘ಇಂಡಿಯಾ’ ಮೈತ್ರಿಕೂಟಕ್ಕೆ ಗೆಲುವು: ಎಕ್ಸಿಟ್ ಪೋಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಜಮ್ಮು ಕಾಶ್ಮೀರದಲ್ಲಿ ‘ಇಂಡಿಯಾ’ ಮೈತ್ರಿಕೂಟಕ್ಕೆ ಗೆಲುವು: ಎಕ್ಸಿಟ್ ಪೋಲ್

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಮತದಾನೋತ್ತರ ಸಮೀಕ್ಷೆ ಪ್ರಕಟವಾಗಿದ್ದು, ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಇರುವ ಸಾಧ್ಯತೆ ಇದೆ ಎಂದು ಬಹುತೇಕ ಸಮೀಕ್ಷೆಗಳು ಹೇಳಿವೆ. 90 ಸದಸ್ಯ ಬಲದ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ಬಹುಮತಕ್ಕೆ 46 ಸ್ಥಾನಗಳನ್ನು ಗಳಿಸಬೇಕಿದೆ.

ಮ್ಯಾಟ್ರಿಜ್ ಸಮೀಕ್ಷೆಯ ಪ್ರಕಾರ ಬಿಜೆಪಿ 28, ಕಾಂಗ್ರೆಸ್ 27, ಪಿಡಿಪಿ 28, ಇತರರು 7 ಸ್ಥಾನಗಳಲ್ಲಿ ಜಯ ಗಳಿಸುವ ಸಾಧ್ಯತೆ ಇದೆ.

ಗುಲಿಸ್ತಾನ್ ಸಮೀಕ್ಷೆಯ ಪ್ರಕಾರ ಬಿಜೆಪಿ 28 -30, ಕಾಂಗ್ರೆಸ್ 31 – 40, ಪಿಡಿಪಿ 5 – 7, ಇತರರು 8 – 16 ಸ್ಥಾನಗಳಲ್ಲಿ ಜಯಗಳಿಸುವ ಸಾಧ್ಯತೆ ಇದೆ.

ಪೀಪಲ್ಸ್ ಪಲ್ಸ್ ಸಮೀಕ್ಷೆಯ ಪ್ರಕಾರ ಬಿಜೆಪಿ 23 -27, ಕಾಂಗ್ರೆಸ್ 46 -60, ಪಿಡಿಪಿ 7- 11, ಇತರರು 4-6 ಸ್ಥಾನಗಳಲ್ಲಿ ಜಯ ಗಳಿಸಬಹುದು.

ಸಿ ವೋಟರ್ ಸಮೀಕ್ಷೆ ಪ್ರಕಾರ ಬಿಜೆಪಿ 27 -32, ಕಾಂಗ್ರೆಸ್ 40 -48, ಪಿಡಿಪಿ 6- 12, ಇತರರು 6- 11 ಸ್ಥಾನಗಳಲ್ಲಿ ಜಯಗಳಿಸುವ ಸಂಭವ ಇದೆ.

ದೈನಿಕ ಭಾಸ್ಕರ್ ಸಮೀಕ್ಷೆಯ ಪ್ರಕಾರ ಬಿಜೆಪಿ 20 -25, ಕಾಂಗ್ರೆಸ್ 35 -40, ಪಿಡಿಪಿ 4 -7, ಇತರರು 12 ಸ್ಥಾನಗಳಲ್ಲಿ ಜಯಗಳಿಸುವ ಸಾಧ್ಯತೆ ಇದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...