ಬೆಂಗಳೂರು: ಹಾಲು ಉತ್ಪಾದಕರಿಗೆ ದ್ರೋಹ ಬಗೆಯುವುದೇ ಕಾಂಗ್ರೆಸ್ ಸರ್ಕಾರದ ಏಕೈಕ ಅಜೆಂಡಾ ಆಗಿದೆ ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ.
ಚುನಾವಣೆಗೂ ಮುನ್ನ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ಹಾಲಿಗೆ 7 ರೂಪಾಯಿ ಸಬ್ಸಿಡಿ ನೀಡುತ್ತೆವೆಂದು ಬೋಗಸ್ ಗ್ಯಾರಂಟಿ ನೀಡಿತ್ತು.
ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಇಲ್ಲಿಯವರೆಗೂ ಹಾಲು ಉತ್ಪಾದಕರಿಗೆ ನೀಡುವ ದರವನ್ನು ಗಣನೀಯವಾಗಿ ಕಡಿತಗೊಳಿಸುತ್ತಾ, ಈಗ ಮತ್ತೊಮ್ಮೆ ಪ್ರತಿ ಲೀಟರ್ ಮೇಲೆ 1.5 ರೂ. ಕಡಿತಗೊಳಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಸಿಎಂ ಸಿದ್ದರಾಮಯ್ಯನವರೆ, ಕೂಡಲೇ ಹಾಲು ಉತ್ಪಾದಕರಿಗೆ ದರ ಹೆಚ್ಚಿಸದಿದ್ದಲ್ಲಿ ಹೋರಾಟ ಖಚಿತ ಎಂದು ಎಚ್ಚರಿಕೆ ನೀಡಿದೆ.