
ಬೆಂಗಳೂರು: ಇಂದು ರಾಜ್ಯ ಬಿಜೆಪಿ ಕೋರ್ಟ್ ಕಮಿಟಿ ಸಭೆ ನಡೆಯಲಿದೆ. ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಹಲವು ಮಹತ್ವದ ವಿಚಾರಗಳು ಚರ್ಚೆಯಾಗಲಿವೆ.
ಬೆಳಿಗ್ಗೆ 11:30ಕ್ಕೆ ಕೋರ್ ಕಮಿಟಿ ಸಭೆ ಆರಂಭವಾಗಲಿದೆ. ಸಭೆಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ, ಉಪಚುನವಣೆ ಸಿದ್ಧತೆ, ಸರ್ಕಾರದ ವಿರುದ್ಧ ಹೋರಾಟ ಸೇರಿದಂತೆ ಮತ್ತಿತರ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ.
ರಾಜ್ಯ ಸರ್ಕಾರದ ವಿರುದ್ಧ ಎರಡನೇ ಹಂತದ ಪಾದಯಾತ್ರೆ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.