alex Certify ಸ್ಪಷ್ಟ ಬಹುಮತವಿದ್ರೂ ಅಡ್ಡ ಮತದಾನ ಭೀತಿಯಲ್ಲಿ ಬಿಜೆಪಿ: ನಾಳೆ ಹುಬ್ಬಳ್ಳಿ –ಧಾರವಾಡ ಮೇಯರ್ ಚುನಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ಪಷ್ಟ ಬಹುಮತವಿದ್ರೂ ಅಡ್ಡ ಮತದಾನ ಭೀತಿಯಲ್ಲಿ ಬಿಜೆಪಿ: ನಾಳೆ ಹುಬ್ಬಳ್ಳಿ –ಧಾರವಾಡ ಮೇಯರ್ ಚುನಾವಣೆ

ಹುಬ್ಬಳ್ಳಿ -ಧಾರವಾಡ ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆ ನಾಳೆ ನಡೆಯಲಿದೆ. ಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು, ಉಪಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ.

ನಾಳೆ ಬೆಳಗ್ಗೆ 9 ರಿಂದ 11 ಗಂಟೆವರೆಗೆ ನಾಮಪತ್ರ ಸಲ್ಲಿಕೆ, ಮಧ್ಯಾಹ್ನ 1 ಗಂಟೆಗೆ ಮೇಯರ್, ಉಪಮೇಯರ್ ಚುನಾವಣೆ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತವಿದ್ದರೂ ಅಡ್ಡ ಮತದಾನದ ಭೀತಿ ಎದುರಾಗಿದೆ.

ಪಕ್ಷದ ಸದಸ್ಯರನ್ನು ದಾಂಡೇಲಿ ರೆಸಾರ್ಟ್ ನಲ್ಲಿ ಇಟ್ಟಿರುವ ಬಿಜೆಪಿ ರೆಸಾರ್ಟ್ ನಿಂದಲೇ ನೇರವಾಗಿ ಸದಸ್ಯರನ್ನು ಮತದಾನಕ್ಕೆ ಕರೆತರಲಿದೆ. ಬಿಜೆಪಿ ಸದಸ್ಯರಿಗೆ ವಿಪ್ ಜಾರಿ ಮಾಡಲಾಗಿದೆ. 39 ಸದಸ್ಯ ಬಲ ಹೊಂದಿರುವ ಬಿಜೆಪಿ, 33 ಸದಸ್ಯ ಬಲ ಹೊಂದಿರುವ ಕಾಂಗ್ರೆಸ್ ಅಧಿಕಾರ ಹಿಡಿಯಲು ಕಾರ್ಯತಂತ್ರ ರೂಪಿಸಿವೆ. ಇದೇ ಮೊದಲ ಬಾರಿಗೆ ಧಾರವಾಡ ಪಾಲಿಕೆ ಕಚೇರಿಯಲ್ಲಿ ಮೇಯರ್ ಚುನಾವಣೆ ನಿಗದಿಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...