ಬೆಂಗಳೂರು: ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಅಂತಿಮಗೊಳಿಸಲು ತೀವ್ರ ಕಸರತ್ತು ನಡೆದಿದ್ದು, ಇಂದು ಅಧಿಕೃತವಾಗಿ 150 ರಿಂದ 175 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.
ದೆಹಲಿಯಲ್ಲಿ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸೇರಿದಂತೆ ಹಲವು ನಾಯಕರು ಸಭೆ ನಡೆಸಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ನಡೆಸಿದ್ದಾರೆ.
ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿಗೆ ಅನುಮೋದನೆ ನೀಡಲಾಗಿದೆ. ರಾಜ್ಯ ಬಿಜೆಪಿ ನಾಯಕರ ಜೊತೆಗೆ ದೆಹಲಿಯಲ್ಲಿ ಪಕ್ಷದ ವರಿಷ್ಠರು ಸಭೆ ನಡೆಸಿದ್ದಾರೆ. ಸಮೀಕ್ಷಾ ವರದಿಗಳು, ವಯಸ್ಸು ಸೇರಿ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಭಾನುವಾರ ಸಂಜೆ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿಗೆ ಅಂತಿಮ ಅನುಮೋದನೆ ನೀಡಲಾಗಿದೆ.