
ನವದೆಹಲಿ: 2024 ರ ಲೋಕಸಭೆ ಚುನಾವಣೆಗೆ ಬಿಜೆಪಿ ಈಗಲೇ ತಯಾರಿ ಆರಂಭಿಸಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ 100 ದಿನ ಭಾರತ ಪ್ರವಾಸ ಕೈಗೊಂಡಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಗೆಲ್ಲದ ಕ್ಷೇತ್ರಗಳ ಮೇಲೆಯೂ ಗಮನಹರಿಸಿ ಸಂಘಟನೆ ಹೆಚ್ಚಿನ ಒತ್ತು ನೀಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ 100 ದಿನಗಳ ರಾಷ್ಟ್ರೀಯ ವಿಸ್ತೃತ ಪ್ರವಾಸ ಕೈಗೊಳ್ಳಲಿದ್ದು, ಪಕ್ಷದ ಸಂಘಟನೆಗೆ ಮತ್ತಷ್ಟು ಬಲ ನೀಡಲು ತೀರ್ಮಾನಿಸಿದ್ದಾರೆ.
ಪ್ರವಾಸದ ಸಂದರ್ಭದಲ್ಲಿ ಎಲ್ಲ ವರ್ಗದ ಜನರನ್ನು ಭೇಟಿಯಾಗಿ ಸಮಾಲೋಚನೆ ನಡೆಸಲಿದ್ದಾರೆ. ಎ,ಬಿ,ಸಿ,ಡಿ ಗುಂಪುಗಳಾಗಿ ರಾಜ್ಯಗಳನ್ನು ವರ್ಗೀಕರಿಸಿ ಗೆಲ್ಲದ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ತಂತ್ರ ರೂಪಿಸಲಾಗಿದೆ. ಪ್ರವಾಸದ ಸಂದರ್ಭದಲ್ಲಿ ಕೆಲವು ರಾಜ್ಯಗಳಲ್ಲಿ ವಾಸ್ತವ್ಯ ಹೂಡಲಿರುವ ನಡ್ಡಾ ಮುಂದಿನ ಲೋಕಸಭೆ ಚುನಾವಣೆ ಗೆಲುವಿಗೆ ಈಗಿನಿಂದಲೇ ಅಗತ್ಯ ಕಾರ್ಯತಂತ್ರ ರೂಪಿಸಲಿದ್ದಾರೆ ಎಂದು ಹೇಳಲಾಗಿದೆ.