
ನವದೆಹಲಿ: ಪಶ್ಚಿಮ ಬಂಗಾಳ, ಕೇರಳ, ಪುದುಚೇರಿ, ತಮಿಳುನಾಡು, ಅಸ್ಸಾಂ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಬಿಜೆಪಿಯಲ್ಲಿ ಚಟುವಟಿಕೆ ಚುರುಕುಗೊಂಡಿವೆ.
ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಚುನಾವಣಾ ಸಮಿತಿ ಸಭೆ ನಡೆದಿದೆ. ಪಂಚ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಸಭೆ ನಡೆದಿದೆ. ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮೊದಲಾದವರು ಭಾಗಿಯಾಗಿದ್ದಾರೆ. ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಕುರಿತಾಗಿ ಚರ್ಚೆ ನಡೆದಿದ್ದು, ಶೀಘ್ರವೇ ಮೊದಲ ಹಂತದ ಚುನಾವಣೆ ನಡೆಯುವ ಕ್ಷೇತ್ರಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎನ್ನಲಾಗಿದೆ.