ಬೆಂಗಳೂರು: ಜುಲೈ 4ರ ಗುರುವಾರದಂದು ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆ ನಡೆಯಲಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸಭೆ ಉದ್ಘಾಟಿಸಲಿದ್ದಾರೆ.
ಅರಮನೆ ಮೈದಾನದ ವೈಟ್ ಪೆಟೆಲ್ಸ್ ಸಭಾಂಗಣದಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆ ನಡೆಯಲಿದೆ. ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ವಿಧಾನ ಪರಿಷತ್ ವಿಪಕ್ಷ ನಾಯಕ ಆರ್. ಅಶೋಕ್ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಲಿದ್ದಾರೆ.
ಕಾರ್ಯಕಾರಿಣಿ ಸಭೆಯಲ್ಲಿ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ಪ್ರಧಾನ ನರೇಂದ್ರ ಮೋದಿಯವರಿಗೆ ಅಭಿನಂದನೆ, ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರ್ಕಾರ ವೈಫಲ್ಯ ಖಂಡಿಸಿ ನಿರ್ಣಯ ಕೈಗೊಳ್ಳುಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಎಂದು ಎನ್. ರವಿಕುಮಾರ್ ತಿಳಿಸಿದ್ದಾರೆ.