ಬೆಂಗಳೂರು : ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ರಾಜ್ಯ ಬಿಜೆಪಿ ಇದೀಗ ರಾಜ್ಯದ 28 ಕ್ಷೇತ್ರಗಳಲ್ಲೂ ಜನರ ನಾಡಿಮಿಡಿತ ತಿಳಿಯಲು ಮಾಸಿಕ ಸರ್ವೆಗೆ ಮುಂದಾಗಿದೆ.
ಹೌದು, ವಿಧಾನಸಭೆ ಚುನಾವಣೆಯಲ್ಲಿ ಸೋಲಿನ ಬಳಿಕ ಎಚ್ಚೆತ್ತಿರುವ ಬಿಜೆಪಿ ಈ ಬಾರಿಯ ಲೋಕಸಭೆ ಚುನಾಣೆಯಲ್ಲಿ ಎಚ್ಚರಿಕೆಯ ಹೆಜ್ಜೆ ಇಡಲು ಮುಂದಾಗಿದ್ದು, ಅದಕ್ಕೂ ಮುನ್ನ ರಾಜ್ಯಾದ್ಯಂತ ಮಾಸಿಕ ಸರ್ವೆ ನಡೆಸಿ ವರದಿಯನ್ನು ಬಿಜೆಪಿ ಹೈಕಮಾಂಡ್ ಗೆ ಕಳಿಸಲು ನಿರ್ಧರಿಸಿದೆ ಎನ್ನಲಾಗಿದೆ.
ರಾಜ್ಯ ಬಿಜೆಪಿ ಘಟಕವು ಖಾಸಗಿ ಸಂಸ್ಥೆ ಮೂಲಕ ರಾಜ್ಯದ 28 ಕ್ಷೇತ್ರಗಳಲ್ಲೂ ಸರ್ವೆಗೆ ಮುಂದಾಗಿದ್ದು, ಯಾವ ಅಭ್ಯರ್ಥಿಗೆ ಟಿಕೆಟ್ ಕೊಟ್ಟರೆ ಗೆಲ್ಲುವ ಸಾಧ್ಯತೆ ಇದೆ. ಬಿಜೆಪಿ ಕಾರ್ಯಕರ್ತರ ಅಭಿಪ್ರಾಯ ಸೇರಿದಂತೆ ವಿವಿಧ ವಿಷಯಗಳ ತಿಳಿದುಕೊಳ್ಳಲು ಖಾಸಗಿ ಸರ್ವೆಗೆ ಸಿದ್ಧತೆ ನಡೆಸಿದೆ. ಈಗಾಗಲೇ ಪ್ರತಿಯೊಂದು ಜಿಲ್ಲೆಗೂ ಸರ್ವೆ ತಂಡ ರವಾನೆಯಾಗಿದ್ದು, ಶೀಘ್ರದಲ್ಲೇ ವರದಿ ನೀಡಲು ಸೂಚನೆ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.