2021-22ರ ಅವಧಿಯಲ್ಲಿ ಬಿಜೆಪಿಗೆ ಬರೋಬ್ಬರಿ 614.53 ಕೋಟಿ ರೂಪಾಯಿ ದೇಣಿಗೆ ಹರಿದು ಬಂದಿದ್ದು, ಇದೇ ಅವಧಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕೇವಲ 95.46 ಕೋಟಿ ರೂಪಾಯಿ ಸಂದಾಯವಾಗಿದೆ.
ಈ ಅವಧಿಯಲ್ಲಿ ಕಾಂಗ್ರೆಸ್ ಗಿಂತ ಬಿಜೆಪಿಗೆ ಆರು ಪಟ್ಟು ಹೆಚ್ಚು ದೇಣಿಗೆ ಸಂದಾಯವಾಗಿದ್ದು, ಚುನಾವಣಾ ಆಯೋಗಕ್ಕೆ ರಾಷ್ಟ್ರೀಯ ಪಕ್ಷಗಳು ನೀಡಿರುವ ಮಾಹಿತಿ ಮೂಲಕ ದೇಣಿಗೆ ವಿಚಾರ ಗೊತ್ತಾಗಿದೆ.
ಇನ್ನು ಪಶ್ಚಿಮ ಬಂಗಾಳದಲ್ಲಿ ಅಧಿಕಾರ ನಡೆಸುತ್ತಿರುವ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ 43 ಲಕ್ಷ ರೂಪಾಯಿ ದೇಣಿಗೆ ಬಂದಿದ್ದರೆ, ಕೇರಳದಲ್ಲಿ ಅಧಿಕಾರ ನಡೆಸುತ್ತಿರುವ ಸಿಪಿಐ(ಎಂ) ಗೆ 10.05 ಕೋಟಿ ರೂಪಾಯಿ ದೇಣಿಗೆ ನೀಡಲಾಗಿದೆ.