
ಬೆಂಗಳೂರು: ಹಿಂದಿನ ಸರ್ಕಾರದಲ್ಲಾದ ನಿಗಮ, ಮಂಡಳಿ ಅಧ್ಯಕ್ಷರ ನಾಮನಿರ್ದೇಶನ ರದ್ದು ಮಾಡಲಾಗಿದೆ. ನಿಗಮ, ಮಂಡಳಿ, ಸಾಯುತ್ತ ಸಂಸ್ಥೆಗಳ ಎಲ್ಲಾ ಅಧ್ಯಕ್ಷರು, ನಿರ್ದೇಶಕರು, ಸದಸ್ಯರುಗಳ ನಾಮನಿರ್ದೇಶನ ರದ್ದು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಸಿದ್ಧರಾಮಯ್ಯ ಅವರು ಸೂಚನೆ ನೀಡಿದ್ದು, ಹಿಂದಿನ ಸರ್ಕಾರದ ಅವಧಿಯಲ್ಲಿನ ನಿಗಮ, ಮಂಡಳಿಗಳ ನಾಮ ನಿರ್ದೇಶನ ರದ್ದು ಮಾಡಲಾಗಿದೆ.