ಬೆಳಗಾವಿ: ಉಪ ಚುನಾವಣೆ ಮುಗಿದ ನಂತರ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಪತನವಾಗಲಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಹೇಳಿದ್ದಾರೆ.
ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ರಾಜ್ಯದ ಬಿಜೆಪಿ ಸರ್ಕಾರ ಪತನಕ್ಕೆ ನಾಂದಿಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಭ್ರಷ್ಟಾಚಾರದಲ್ಲಿ ತೊಡಗಿರುವ ಬಿಜೆಪಿ ಸರ್ಕಾರ ಬದಲಾವಣೆ ಮಾಡಲು ಜನ ಕಾಯುತ್ತಿದ್ದಾರೆ. ರಾಜ್ಯದಲ್ಲಿ ಮಾತ್ರವಲ್ಲದೆ, ದೇಶದಲ್ಲಿ ಕೂಡ ಬದಲಾವಣೆಯಾಗುವುದು ಸ್ಪಷ್ಟವಾಗಿದೆ ಎಂದು ಅವರು ಹೇಳಿದ್ದಾರೆ.