ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಯ ನಂತರ ರಾಜ್ಯ ಬಿಜೆಪಿ ಸರ್ಕಾರ ಪತನವಾಗಲಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜನರ ಒಳಿತಿಗಾಗಿ ಬಿಜೆಪಿ ಸರ್ಕಾರ ಕೆಲಸ ಮಾಡುತ್ತಿಲ್ಲ. ಸರ್ಕಾರದ ನಡೆಗೆ ದೆಹಲಿ ಬಿಜೆಪಿ ನಾಯಕರು ಕೂಡ ಬೇಸತ್ತಿದ್ದಾರೆ. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಯಡಿಯೂರಪ್ಪ ಸರ್ಕಾರ ಜನರಿಂದ ಆಯ್ಕೆಯಾದ ಸರ್ಕಾರವಲ್ಲ. ಭ್ರಷ್ಟಾಚಾರ, ಅಕ್ರಮ ಹಣದ ಮೂಲಕ ಸರ್ಕಾರ ರಚನೆಯಾಗಿದೆ ಎಂದು ವಾಗ್ದಾಳಿ ನಡೆಸಿದ್ದು, ನಾವು ಸಂಪೂರ್ಣ ಬಹುಮತ ಪಡೆಯಲು ಸಾಧ್ಯವಾಗಲಿಲ್ಲ. ಗ್ರಾಮ ಪಂಚಾಯಿತಿ ಚುನಾವಣೆಯ ನಂತರ ರಾಜ್ಯ ಸರ್ಕಾರ ಪತನವಾಗಲಿದೆ ಎಂದು ಅವರು ಹೇಳಿದ್ದಾರೆ.