ಬೀದರ್: ಜನವರಿಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರುವ ಸಂಭವ ಇದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೊಸ ಬಾಂಬ್ ಸಿಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈಗ ಕಾಂಗ್ರೆಸ್ ಸರ್ಕಾರ ಇರಬಹುದು. ಆದರೆ, ಮುಂದಿನ ಜನವರಿಗೆ ನಮ್ಮ ಸರ್ಕಾರ ಕೂಡ ಬರಬಹುದು ಎಂದು ಹೇಳಿದ್ದಾರೆ.
ಕಳೆದ ನಾಲ್ಕು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಜನರ ವಿಶ್ವಾಸ ಕಳೆದುಕೊಂಡಿದೆ. ಯಾವುದೇ ಕ್ಷೇತ್ರಗಳಲ್ಲಿ ಅಭಿವೃದ್ಧಿ ನಡೆಯುತ್ತಿಲ್ಲ. ಮುಖ್ಯಮಂತ್ರಿಗಳ ವಿರುದ್ಧ ಅವರ ಪಕ್ಷದವರೇ ಅಸಮಾಧಾನ ಹೊರಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.