ನವದೆಹಲಿ: ದೇಶದ ಗಮನಸೆಳೆದ ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ.
ಮತ ಎಣಿಕೆ ಆರಂಭವಾಗುತ್ತಿದ್ದಂತೆ ಗುಜರಾತ್ ನಲ್ಲಿ ಬಿಜೆಪಿ 100 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದೆ. ಗುಜರಾತ್ ನ 182 ವಿಧಾನಸಭಾ ಕ್ಷೇತ್ರಗಳಿಗೆ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತದಲ್ಲಿ ಮತದಾನ ನಡೆದಿತ್ತು. ಸತತ 7ನೇ ಬಾರಿಗೆ ಅಧಿಕಾರಕ್ಕೆ ಇರುವ ನಿರೀಕ್ಷೆಯಲ್ಲಿ ಬಿಜೆಪಿ ಇದೆ. ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿ ಅಧಿಕಾರಕ್ಕೇರುವುದಾಗಿ ಹೇಳಲಾಗಿದೆ.
ಬಿಜೆಪಿ ಅಭ್ಯರ್ಥಿಗಳು 100 ಕ್ಷೇತ್ರಗಳಲ್ಲಿ ಕಾಂಗ್ರೆಸ್ 25 ಹಾಗೂ ಆಮ್ ಆದ್ಮಿ ಪಕ್ಷದ ಮೂವರು ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ 18 ಹಾಗೂ ಕಾಂಗ್ರೆಸ್ 18 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಹಿಮಾಚಲ ಪ್ರದೇಶದಲ್ಲಿ ನವೆಂಬರ್ 12ರಂದು 68 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆದಿತ್ತು. 1985ರಿಂದ ಪ್ರತಿ ಐದು ವರ್ಷಕ್ಕೊಮ್ಮೆ ಇಲ್ಲಿ ಸರ್ಕಾರ ಬದಲಾಗುತ್ತೆ. ಒಮ್ಮೆ ಬಿಜೆಪಿ, ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೇರುತ್ತವೆ. ಈ ಬಾರಿ ಆಡಳಿತಾರೂಢ ಬಿಜೆಪಿಯೇ ಅಧಿಕಾರಕ್ಕೆರಲಿದೆ ಎಂದು ಸಮೀಕ್ಷೆಗಳು ಹೇಳಿವೆ.