
ಬೆಂಗಳೂರು: ಐಎಎಸ್ ಅಧಿಕಾರಿಗಳ ದುರ್ಬಳಕೆ ಆರೋಪ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿ, ಜೆಡಿಎಸ್ ವತಿಯಿಂದ ರಾಜ್ಯಪಾಲರಿಗೆ ದೂರು ನೀಡಲಾಗಿದೆ.
ಸದನದಲ್ಲಿ ಬಿಜೆಪಿ, ಜೆಡಿಎಸ್ ಒಟ್ಟಿಗೆ ಹೋರಾಟ ನಡೆಸುತ್ತಿದ್ದು, ಸದನದ ಹೊರಗೂ ಉಭಯ ಪಕ್ಷಗಳು ಒಗ್ಗಟ್ಟಿನಿಂದ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ನಡೆಸಿವೆ. ಇಂದು ರಾಜ್ಯಪಾಲರಿಗೆ ಬಿಜೆಪಿ ನಾಯಕರಾದ ಬಸವರಾಜ್ ಬೊಮ್ಮಾಯಿ, ಸಿ.ಟಿ. ರವಿ, ನಳಿನ್ ಕುಮಾರ್ ಕಟೀಲು, ಸುನಿಲ್ ಕುಮಾರ್, ಆರ್. ಅಶೋಕ್ ಮೊದಲಾದವರು ದೂರು ನೀಡಿದ್ದು, ಈ ಸಂದರ್ಭದಲ್ಲಿ ಜೆಡಿಎಸ್ ನಾಯಕರಾದ ಹೆಚ್.ಡಿ. ಕುಮಾರಸ್ವಾಮಿ, ಹೆಚ್.ಡಿ. ರೇವಣ್ಣ, ಜಿ.ಟಿ. ದೇವೇಗೌಡ ಮೊದಲಾದವರು ಇದ್ದರು.
ಸುಗಮವಾಗಿ ಮತ್ತು ನಿಷ್ಪಕ್ಷಪಾತವಾಗಿ ಕಲಾಪ ನಡೆಸಲು ಸ್ಪೀಕರ್ ವಿಫಲರಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಜೊತೆಯಾಗಿ ದೂರು ನೀಡಿದ್ದಾರೆ. ಬಿಜೆಪಿ ಲೆಟರ್ ಹೆಡ್ ನಲ್ಲಿ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕರಾದ ಹೆಚ್..ಡಿ ಕುಮಾರಸ್ವಾಮಿ, ಜಿ.ಟಿ. ದೇವೇಗೌಡ, ಭೋಜೇಗೌಡ, ಟಿ.ಎ. ಶರವಣ ಸಹಿ ಮಾಡಿದ್ದಾರೆ.