ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದ್ದು, ಹೈಕಮಾಂಡ್ ಬುಲಾವ್ ಮೇರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ದಿಢೀರ್ ದೆಹಲಿಗೆ ತೆರಳಿದ್ದಾರೆ.
ದಾವಣಗೆಯ ರಾಜನಹಳ್ಳಿಯಲ್ಲಿ ನಡೆಯುತ್ತಿರುವ ವಾಲ್ಮೀಕಿ ಜಾತ್ರೆಯಲ್ಲಿ ಪಾಲ್ಗೊಳ್ಳುವ ನಿಟ್ಟಿನಲ್ಲಿ ದಾವಣಗೆರೆಗೆ ಪ್ರಯಾಣಿಸುತ್ತಿದ್ದ ಬಿ.ವೈ.ವಿಜಯೇಂದ್ರ ಅವರಿಗೆ ವರಿಷ್ಠರು ದೆಹಲಿಗೆ ಬರುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ತಮ್ಮ ಪ್ರಯಾಣ ಅರ್ಧಕ್ಕೆ ಮೊಟಕುಗೊಳಿಸಿ ಬೆಂಗಳೂರಿಗೆ ವಾಪಾಸ್ ಆಗಿದ್ದಾರೆ. ಬಳಿಕ ದೆಹಲಿಗೆ ತೆರಳಿದ್ದಾರೆ.
ದಾವಣಗೆರೆಗೆ ತೆರಳಲೆಂದು ನೆಲಮಂಗಲದವರೆಗೆ ಹೋಗಿದ್ದ ವಿಜಯೇಂದ್ರ ಅವರಿಗೆ ಬಿಜೆಪಿ ವರಿಷ್ಠರು ಬುಲಾವ್ ನೀಡಿದ ಹಿನ್ನೆಲೆಯಲ್ಲಿ ನೆಲಮಂಗಲದಿಂದಲೇ ವಾಪಾಸ್ ಆಗಿದ್ದು, ಹೈಕಮಾಂಡ್ ಭೇಟಿಗಾಗಿ ದೆಹಲಿಗೆ ಪ್ರಯಾಣಿಸಿದ್ದಾರೆ.
ಯತ್ನಾಳ್ ಟೀಂ ದೆಹಲಿಗೆ ತೆರಳಲು ಸಿದ್ಧತೆ ನಡೆಸಿರುವಾಗಲೇ ವಿಜಯೇಂದ್ರಗೆ ವರಿಷ್ಠರು ಬುಲಾವ್ ನೀಡಿದ್ದು, ರಾಜ್ಯ ಬಿಜೆಪಿಯಲ್ಲಿ ಚಟುವಟಿಕೆ ಗರಿಗೆದರಿದ್ದು, ಕುತೂಹಲ ಮೂಡಿಸಿದೆ.