
ಬೆಂಗಳೂರು: ಬೆಂಗಳೂರಿನಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಲು ಅಡ್ಡಿಪಡಿಸಿದ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದ್ದು, ಪೊಲೀಸ್ ಠಾಣೆಯ ಮುಂದೆ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಬೆಂಗಳೂರಿನ ವಿದ್ಯಾರಣ್ಯ ಠಣೆಯ ಮುಂದೆ ಜಮಾವಣೆಗೊಂಡಿರುವ ಕಾರ್ಯಕರ್ತರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಮುಖಂಡರೊಬ್ಬರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಇಂತಹ ಘಟನೆಗಳು ನಿರಂತರವಾಗಿ ನಡೆಯುತ್ತವೆ. ಇದಕ್ಕೆ ಕುಮ್ಮಕ್ಕು ಸಿಎಂ ಸಿದ್ದರಾಮಯ್ಯ. ರಾಜ್ಯದಲ್ಲಿ ಶಾಂತಿ ಕದಡುವ ಕೆಲಸ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತ ಯುವಕರು ಹೊರತುಪಡಿಸಿ ಅವರ ಹಿಂದೆ ಇನ್ನಷ್ಟು ಜನರಿದ್ದಾರೆ ಅವರನ್ನು ಕೂಡ ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.