ಬೆಂಗಳೂರು : ಯಾರಿಗಾದ್ರೂ ಅವರ ತಾತ, ಮುತ್ತಾತನ ಹೆಸರು ಗೊತ್ತಿಲ್ಲವೆಂದ್ರೆ ಅವರಿಗೆ ತಾತ-ತಂದೆಯಿಲ್ಲ ಎಂದಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಗೆ ಬಿಜೆಪಿ ಟ್ವೀಟ್ ಮೂಲಕ ತಿರುಗೇಟು ನೀಡಿದೆ.
ಯಾರಿಗಾದರೂ ಅವರ ಮುತ್ತಾತನ, ತಾತನ ಹೆಸರು ಗೊತ್ತಿಲ್ಲವೆಂದರೆ ಅವರಿಗೆ ತಾತ-ತಂದೆಯಿಲ್ಲ ಎಂದಲ್ಲ, ಅವರಿಗೆ ಆ ಬಗ್ಗೆ ಜ್ಞಾನವಿಲ್ಲ ಎಂದಷ್ಟೇ. ಪಾಪ ಪರಮೇಶ್ ಅವರ ಸ್ಮೃತಿ I.N.D.I ಮೈತ್ರಿಕೂಟದ ಪ್ರಭಾವದಿಂದಾಗಿ ಕೊಂಚ ಪಲ್ಲಟವಾದ ಹಾಗಿದೆ ಎಂದು ತಿರುಗೇಟು ನೀಡಿದೆ.
ಹಿಂದೂ ಧರ್ಮ ಒಬ್ಬ ಪುರುಷ ಅಥವಾ ಒಂದು ಪುಸ್ತಕದಿಂದ ಹುಟ್ಟಿದ ಧರ್ಮವಲ್ಲ. ಅದಕ್ಕೆ ಆದಿಯೂ ಇಲ್ಲ, ಅಂತ್ಯವೂ ಇಲ್ಲ. ಇದೊಂದು ಸಹಸ್ರಾರು ವರ್ಷಗಳಿಂದ ನಡೆದು ಬಂದ, ಬಹು ಉಪಾಸನಾ ವಿಧದ ಜೀವನ ಪದ್ಧತಿ ಎಂಬ ಕಾರಣಕ್ಕೇ ಇದು ಸನಾತನ ಧರ್ಮ ಮತ್ತು ಭಾರತ ಸನಾತನ ಭೂಮಿ.ಔರಂಗಜೇಬನಿಂದ ಹಿಡಿದು ಉದಯನಿಧಿ ಸ್ಟಾಲಿನ್ವರೆಗೆ ಅವೆಷ್ಟೋ ದಾಳಿಕೋರರನ್ನು ಈ ಮಣ್ಣು ಕಂಡ ಮೇಲೂ ತನ್ನ ಅಸ್ತಿತ್ವ ಉಳಿಸಿಕೊಂಡಿದೆ. ಧರ್ಮ ಜಿಜ್ಞಾಸೆಗಿಂತಲೂ ಹೆಚ್ಚು ಸದ್ಯಕ್ಕೆ ನಿಮ್ಮ ಪಕ್ಷದಲ್ಲೇ ನಿಮ್ಮ ಅಸ್ತಿತ್ವ ಉಳಿಸಿಕೊಳ್ಳುವ ಕಡೆಗೆ ಹೆಚ್ಚಿನ ಗಮನ ಕೊಡುವುದು ನಿಮ್ಮ ವೈಯಕ್ತಿಕ ಹಿತದ ದೃಷ್ಟಿಯಿಂದ ಒಳಿತು.
ಯಾರಿಗಾದರೂ ಅವರ ಮುತ್ತಾತನ, ತಾತನ ಹೆಸರು ಗೊತ್ತಿಲ್ಲವೆಂದರೆ ಅವರಿಗೆ ತಾತ-ತಂದೆಯಿಲ್ಲ ಎಂದಲ್ಲ, ಅವರಿಗೆ ಆ ಬಗ್ಗೆ ಜ್ಞಾನವಿಲ್ಲ ಎಂದಷ್ಟೇ. ಪಾಪ @DrParameshwara ಅವರ ಸ್ಮೃತಿ I.N.D.I ಮೈತ್ರಿಕೂಟದ ಪ್ರಭಾವದಿಂದಾಗಿ ಕೊಂಚ ಪಲ್ಲಟವಾದ ಹಾಗಿದೆ.
ಹಿಂದೂ ಧರ್ಮ ಒಬ್ಬ ಪುರುಷ ಅಥವಾ ಒಂದು ಪುಸ್ತಕದಿಂದ ಹುಟ್ಟಿದ ಧರ್ಮವಲ್ಲ. ಅದಕ್ಕೆ ಆದಿಯೂ… pic.twitter.com/yCWrvb5gsP
— BJP Karnataka (@BJP4Karnataka) September 6, 2023
ಏನಿದು ಪರಮೇಶ್ವರ್ ಹೇಳಿಕೆ..?
ಪ್ರಪಂಚದ ಇತಿಹಾಸದಲ್ಲಿ ಅನೇಕ ಧರ್ಮಗಳು ಹುಟ್ಟಿಕೊಂಡಿವೆ. ಹಿಂದೂ ಧರ್ಮವನ್ನು ಯಾರು ಹುಟ್ಟಿಸಿದರು? ಯಾವಾಗ ಹುಟ್ಟಿದ್ದು ಎಂಬ ಬಗ್ಗೆ ಇನ್ನೂ ಪ್ರಶ್ನಾರ್ಥಕ ಚಿಹ್ನೆ ಇದೆ. ಪ್ರಶ್ನಾರ್ಥಕ ಚಿಹ್ನೆ ತೆಗೆದಿಲ್ಲ ಎಂದು ಹೇಳಿದ್ದಾರೆ.
ನಮ್ಮ ದೇಶದಲ್ಲಿ ಬೌದ್ಧ ಧರ್ಮ ಹಾಗೂ ಜೈನ ಧರ್ಮ ಹುಟ್ಟಿವೆ. ಹೊರಗಡೆಯಿಂದ ಇಸ್ಲಾಂ ಧರ್ಮ ಹಾಗೂ ಕ್ರೈಸ್ತ ಧರ್ಮ ಬಂದಿವೆ. ಮನುಕುಲಕ್ಕೆ ಒಳ್ಳೆಯದಾಗಬೇಕೆಂಬುದೇ ಎಲ್ಲಾ ಧರ್ಮಗಳ ಸಾರವಾಗಿದೆ ಎಂದು ಪರಮೇಶ್ವರ್ ಹೇಳಿದ್ದಾರೆ.