alex Certify ಬಿಜೆಪಿ ಪರಿವಾರ ಅಂಬೇಡ್ಕರ್ ಭಾವಚಿತ್ರ, ಸಂವಿಧಾನ ಸುಟ್ಟಿತ್ತು: ಸಿಎಂ ಸಿದ್ಧರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಪರಿವಾರ ಅಂಬೇಡ್ಕರ್ ಭಾವಚಿತ್ರ, ಸಂವಿಧಾನ ಸುಟ್ಟಿತ್ತು: ಸಿಎಂ ಸಿದ್ಧರಾಮಯ್ಯ

ಬೆಳಗಾವಿ: ಸಂವಿಧಾನ ದ್ವೇಷಿಯಾಗಿರುವ ಆರ್.ಎಸ್.ಎಸ್ ಸಿದ್ಧಾಂತವನ್ನು ಬಿಜೆಪಿ ಭಾರತೀಯರ ಮೇಲೆ ಹೇರುತ್ತಿದ್ದು, ಇದನ್ನು ಹಿಮ್ಮೆಟ್ಟಿಸೋಣ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ಬೆಳಗಾವಿಯಲ್ಲಿ ಐತಿಹಾಸಿಕ ಜೈ ಬಾಪು-ಜೈ ಭೀಮ್- ಜೈ ಸಂವಿಧಾನ ಅಭಿಯಾನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಿಜೆಪಿ ಪರಿವಾರ ಭಾರತದಲ್ಲಿ ಬಹಳ ವ್ಯವಸ್ಥಿತವಾಗಿ ಒಡಕು ತರುತ್ತಿದೆ. ಭಾರತೀಯರ ನಡುವೆ ಬಿರುಕು ಮೂಡಿಸುತ್ತಾ ಭಾರತವನ್ನು ದುರ್ಬಲಗೊಳಿಸುತ್ತಿದೆ. ಬಿಜೆಪಿಯ ಈ ಯತ್ನವನ್ನು ನಾವು ಸೋಲಿಸಬೇಕು. ಇದಕ್ಕೆ ಗಾಂಧಿ-ಅಂಬೇಡ್ಕರ್ ನಮಗೆ ಮಾರ್ಗದರ್ಶಕರು ಎಂದು ಹೇಳಿದ್ದಾರೆ.

ಸಂವಿಧಾನ ಜಾರಿಯಾದಾಗ ಬಿಜೆಪಿ ಪರಿವಾರ ಅಂಬೇಡ್ಕರ್ ಭಾವಚಿತ್ರವನ್ನು, ಸಂವಿಧಾನವನ್ನು ಸುಟ್ಟಿತ್ತು. ಇದನ್ನು ಈ ದೇಶ, ದೇಶದ ಜನ ಸಮುದಾಯ ಯಾವತ್ತೂ ಕ್ಷಮಿಸುವುದಿಲ್ಲ, ಮರೆಯುವುದಿಲ್ಲ. ಹಲವು ಭಾಷೆ, ಹಲವು ಜಾತಿ, ಹಲವು ಧರ್ಮ‌ ಭಾರತದ ಶಕ್ತಿ. ಬಿಜೆಪಿ ಪರಿವಾರ ಗಾಂಧಿ, ಅಂಬೇಡ್ಕರ್ ರನ್ನು ದ್ವೇಷಿಸುತ್ತದೆ. ನಾವು ಇಬ್ಬರ ಆಶಯಗಳನ್ನೂ ಪೀಳಿಗೆಯಿಂದ ಪೀಳಿಗೆಗೆ ದಾಟಿಸುತ್ತೇವೆ, ವಿಸ್ತರಿಸುತ್ತೇವೆ ಎಂದು ಹೇಳಿದ್ದಾರೆ.

ನಾವು ಸಂವಿಧಾನ ರಕ್ಷಿಸಿದರೆ, ಸಂವಿಧಾನ ನಮ್ಮೆಲ್ಲರನ್ನೂ ರಕ್ಷಿಸುತ್ತದೆ. ನಮಗೆ ಚುನಾವಣೆ ಗೆಲ್ಲುವುದಕ್ಕಿಂತ ನಮ್ಮ ಸಿದ್ಧಾಂತ ಗೆಲ್ಲಬೇಕು. ಅದು ಮಾತ್ರ ನಮ್ಮ ನಿಜವಾದ ಗೆಲುವು. ಗಾಂಧಿ ಅಂಬೇಡ್ಕರ್ ಅವರ ಆಶಯಗಳು, ಮೌಲ್ಯಗಳ ಈಡೇರಿಕೆಗೆ ನಾವು ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ್ದೇವೆ. ಇದಕ್ಕಾಗಿ ಬಜೆಟ್ ನಲ್ಲಿ 52 ಸಾವಿರ ಕೋಟಿಗೂ ಅಧಿಕ ಮೊತ್ತದ ಹಣವನ್ನು ನೇರವಾಗಿ ಜನರ ಖಾತೆಗೆ ಹಾಕಿ ರಾಜ್ಯದ ಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸಿದ್ದೇವೆ ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...