ಬೆಂಗಳೂರು : ಬಿಜೆಪಿಯವರು ಪ್ರಜಾಪ್ರಭುತ್ವ ವಿರೋಧಿಗಳು, ಅನಾಗರಿಕರು ಎಂದು ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ಬಿಜೆಪಿಯವರು ಪ್ರಜಾಪ್ರಭುತ್ವ ವಿರೋಧಿಗಳು, ಅವರಿಗೆ ಸದನದಲ್ಲಿ ಹೇಗೆ ವರ್ತಿಸಬೇಕು ಎಂಬುದು ಗೊತ್ತಿಲ್ಲ, ಅವರು ಅನಾಗರಿಕರು ಎಂದು ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ. ನಾನು ಯಾವತ್ತಿಗೂ ಇಂತಹ ಅನಾಗರಿಕ ವರ್ತನೆಯನ್ನು ನೋಡಿಲ್ಲ. ವಿಧಾನಸಭೆ ಡೆಪ್ಯುಟಿ ಸ್ಪೀಕರ್ ಮುಖವೇ ಸಪ್ಪೆ ಆಗಿದೆ. ಯೋಚನೆ ಮಾಡಬೇಡಿ ನಾವು ನಿಮ್ಮ ಜೊತೆ ಇದ್ದೇವೆ ಎಂದಿದ್ದೇನೆ, ಮಾರ್ಷಲ್ ಇಲ್ಲದಿದ್ರೆ ಡೆಪ್ಯುಟಿ ಸ್ಪೀಕರ್ ಮೇಲೆ ಹಲ್ಲೆ ಮಾಡುತ್ತಿದ್ದರೇನೋ ಎಂದರು.
ನಾವು ಕೊಟ್ಟ ಗ್ಯಾರಂಟಿಗಳಿಂದ ಜನರು ತುಂಬಾ ಸಂತಸವಾಗಿದ್ದಾರೆ. ಆದರೆ ಈ ಬಿಜೆಪಿಯವರಿಗೆ ಇದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಕಿಡಿಕಾರಿದರು. ಬಿಜೆಪಿಗೆ ಒಬ್ಬ ವಿಪಕ್ಷ ನಾಯಕನ ಆಯ್ಕೆ ಮಾಡಿಕೊಳ್ಳಲು ಆಗಿಲ್ಲ ಅಂದರೆ ಅದು ಪ್ರಜಾಪ್ರಭುತ್ವಕ್ಕೆ ಮಾರಕ. ಬಿಜೆಪಿಯವರಿಗೆ ಪ್ರಜಾಪ್ರಭುತ್ವ ವ್ಯವಸ್ಥೆಗಳ ಮೇಲೆ ನಂಬಿಕೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. ಬಿಜೆಪಿ ಯಾವಾಗಲೂ ವಿಪಕ್ಷವಾಗಿಯೇ ಇರಬೇಕು. ಬಿಜೆಪಿಯ ಅವನತಿ ಕರ್ನಾಟಕದಿಂದ ಶುರುವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ವಿಧಾನಸಭೆಯಲ್ಲಿ ಅಗೌರವ ತೋರಿದ 10 ಮಂದಿ ಬಿಜೆಪಿ ಶಾಸಕರಿಗೆ ವಿಧಾನಸಭೆ ಪ್ರವೇಶ ನಿರ್ಬಂಧಿಸಲಾಗಿದೆ. ವಿಧಾನಸಭೆಯಲ್ಲಿ ಅಸಭ್ಯ ವರ್ತನೆ, ಅಗೌರವ ತೋರಿದ 10 ಮಂದಿ ಬಿಜೆಪಿ ಶಾಸಕರನ್ನು ಈ ಅಧಿವೇಶನ ಮುಗಿಯುವವರೆಗೂ ಅಮಾನತು ಮಾಡಲಾಗಿತ್ತು, ಸದನ ಮುಗಿಯುವವರೆಗೂ 10 ಮಂದಿ ಬಿಜೆಪಿ ಶಾಸಕರಿಗೆ ವಿಧಾನಸಭೆ ಪ್ರವೇಶ ನಿರ್ಬಂಧಿಸಲಾಗಿದೆ ಎಂಬುದು ಸ್ಪಷ್ಟವಾಗಿದೆ, ಅಮಾನತಾದ 10 ಮಂದಿ ಶಾಸಕರ ಪಟ್ಟಿಗಳನ್ನು ಮಾರ್ಷಲ್ ಗೆ ನೀಡಲಾಗಿದೆ ಎಂಬುದು ತಿಳಿದು ಬಂದಿದೆ. ಡಾ.ಸಿಎನ್ ಅಶ್ವತ್ಥನಾರಾಯಣ್, ಆರ್ ಅಶೋಕ್, ವೇದವ್ಯಾಸ ಕಾಮತ್, ಅರವಿಂದ್ ಬೆಲ್ಲದ್, ಅರಗ ಜ್ಞಾನೇಂದ್ರ , ವಿ.ಸುನೀಲ್ ಕುಮಾರ್, , ವೈ ಭರತ್ ಶೆಟ್ಟಿ , ಯಶಪಾಲ್ ಸುವರ್ಣ, ಮುನಿರಾಜ್, ಉಮರ್ ನಾಥ್ ಕೋಟ್ಯನ್ ಅವರನ್ನು ಸದನ ಮುಗಿಯುವವರೆಗೂ ಅಮಾನತುಗೊಳಿಸಲಾಗಿದೆ.