alex Certify 3 ತಿಂಗಳಿಂದ ಬಿಜೆಪಿ ‘HDK’ ಆಡಿಷನ್ ಮಾಡುತ್ತಿದೆ, ಶೀಘ್ರದಲ್ಲೇ ಒಂದು ಹುದ್ದೆ ಕೊಡಲಿದೆ : ಎಂ. ಲಕ್ಷ್ಮಣ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

3 ತಿಂಗಳಿಂದ ಬಿಜೆಪಿ ‘HDK’ ಆಡಿಷನ್ ಮಾಡುತ್ತಿದೆ, ಶೀಘ್ರದಲ್ಲೇ ಒಂದು ಹುದ್ದೆ ಕೊಡಲಿದೆ : ಎಂ. ಲಕ್ಷ್ಮಣ್

ಬೆಂಗಳೂರು : ಬಿಜೆಪಿ ಕಳೆದ ಮೂರು ತಿಂಗಳಿಂದ ಕುಮಾರಸ್ವಾಮಿ ಅವರ ಆಡಿಷನ್ ಮಾಡುತ್ತಿದೆ. ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಹೇಗೆ ವಾಗ್ದಾಳಿ ಮಾಡುತ್ತಾರೆ ಎಂಬುದರ ಮೇಲೆ ಅವರಿಗೆ ಯಾವ ಹುದ್ದೆ ನೀಡಬೇಕು ಎಂಬುದನ್ನು ನಿರ್ಧರಿಸಲಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿರುವ ಎಂ. ಲಕ್ಷ್ಮಣ್ ಎರಡು ಬಾರಿ ಮುಖ್ಯಮಂತ್ರಿಯಾಗಿರುವ ಕುಮಾರಸ್ವಾಮಿ ಅವರಿಗೆ ಕನಿಷ್ಠ ನೈತಿಕತೆ ಇದ್ದರೆ, ಯಾರದೋ ಮೇಲಿನ ಐಟಿ ದಾಳಿಗೆ ಕಾಂಗ್ರೆಸ್ ಜತೆ ನಂಟು ಹಾಕುತ್ತಿರುತ್ತಿರಲಿಲ್ಲ. ಇವರ ನಾಟಕವನ್ನು ಜನ ನೋಡುತ್ತಿದ್ದಾರೆ. ಈಗಾಗಲೇ ಅವರನ್ನು ಕಳೆದ ಚುನಾವಣೆಯಲ್ಲಿ ತಿರಸ್ಕರಿಸಿದ್ದು, ಮುಂದಿನ ಲೋಕಸಭೆ ಚುನಾವಣೆಯಲ್ಲೂ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಹೇಳಿದ್ದಾರೆ.

ಐಟಿ ಇಲಾಖೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ಈ ಹೇಳಿಕೆಯಲ್ಲಿ ಎಲ್ಲಾದರೂ ಈ ಪ್ರಕರಣಕ್ಕೂ ಕಾಂಗ್ರೆಸ್ ಮುಖಂಡರಿಗೂ ಲಿಂಕ್ ತೋರಿಸಿದ್ದಾರಾ? ಐಟಿ ಇಲಾಖೆ ಪ್ರಕಟಣೆಯಲ್ಲಿ, ತೆರಿಗೆ ವಂಚನೆ ಉದ್ದೇಶದಿಂದ ಕೆಲವು ಗುತ್ತಿಗೆದಾರರು, ವಾಸ್ತುಶಿಲ್ಪಿಗಳು ಡಿಜಿಟಲ್ ಮಾರ್ಗದಲ್ಲಿ ವ್ಯವಹಾರ ಮಾಡದೇ, ನಗದಿನ ರೂಪದಲ್ಲಿ ವ್ಯವಹಾರ ಮಾಡಿದ್ದಾರೆ ಎಂದು ಸ್ಪಷ್ಟವಾಗಿ ಹೇಳಿದೆ. ಐಟಿ ಇಲಾಖೆ ಸ್ಪಷ್ಟ ಹೇಳಿಕೆ ನೀಡಿದ ನಂತರವೂ ಬಿಜೆಪಿ ಪ್ರತಿಭಟನೆ ಮಾಡುತ್ತಿರುವುದು ದುರಂತ ಎಂದಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...