alex Certify ‘ನಮ್ಮ ಸರ್ಕಾರದಲ್ಲಿ ಹಣ ಇಲ್ಲಅಂತ ಬಿಜೆಪಿ ಸುಳ್ಳು ಹೇಳುತ್ತಿದೆ’-ಸಿಎಂ ಸಿದ್ದರಾಮಯ್ಯ ಕಿಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ನಮ್ಮ ಸರ್ಕಾರದಲ್ಲಿ ಹಣ ಇಲ್ಲಅಂತ ಬಿಜೆಪಿ ಸುಳ್ಳು ಹೇಳುತ್ತಿದೆ’-ಸಿಎಂ ಸಿದ್ದರಾಮಯ್ಯ ಕಿಡಿ

ವಿಜಯಪುರ : ಹಣ ಇಲ್ಲದೆ ಗ್ಯಾರಂಟಿ ಯೋಜನೆಗಳು, ಇಷ್ಟೆಲ್ಲಾ ಅಭಿವೃದ್ಧಿ ಕಾರ್ಯಗಳು ನಡೆಯಲು ಹೇಗೆ ಸಾಧ್ಯ? ಎಂದು ವಿಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ಕೌಂಟರ್ ನೀಡಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುದ್ದೇಬಿಹಾಳ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ, ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದರು.

ನಾನು ಬಸವಾದಿ ಶರಣರ ಅನುಯಾಯಿ. ಮೌಡ್ಯ, ಕಂದಾಚಾರ, ಜಾತಿ ತಾರತಮ್ಯದ ವಿರುದ್ಧ ವಚನಕ್ರಾಂತಿ ಆರಂಭಿಸಿದ್ದರಿಂದ ನಾನು ಅವರ ಅನುಯಾಯಿ.ದುಡಿಯುವವರು ಯಾರೋ, ಕೂತು ತಿನ್ನುವವರು ಇನ್ಯಾರೋ ಎನ್ನುವ ಪರಿಸ್ಥಿತಿ ಸಮಾಜದಲ್ಲಿತ್ತು. ಈ ತಾರತಮ್ಯ ಮತ್ತು ಮೇಲು-ಕೀಳು ಹೋಗಲಾಡಿಸಲು ಬಸವಣ್ಣನವರ ನೇತೃತ್ವದಲ್ಲಿ ವಚನಕ್ರಾಂತಿ ಶುರು ಆಯಿತು. ಈ ಕಾರಣಕ್ಕೆ ನಾನು ಬಸವಾದಿ ಶರಣರ ಅನುಯಾಯಿ. ಇವರು ಕರ್ಮ ಸಿದ್ಧಾಂತವನ್ನು ಸಂಪೂರ್ಣ ತಿರಸ್ಕರಿಸಿದರು.

ಕ್ರಾಂತಿಯ ಪ್ರಭಾವದಲ್ಲಿ ಸಮಾಜ ಪೂರ್ಣ ಬದಲಾಗುವ ಮೊದಲೇ ವಚನ ಕ್ರಾಂತಿಗೆ ಅಡ್ಡಗಾಲು ಹಾಕಿದರು. ಆದ್ದರಿಂದ ಇನ್ನೂ ಬಸವಣ್ಣನವರ “ಇವ ನಮ್ಮವ ಇವ ನಮ್ಮವ” ಎನ್ನುವ ಆಶಯ ಈಡೇರದೆ ಜಾತಿ ವ್ಯವಸ್ಥೆ ಗಟ್ಟಿಯಾಗಿದೆ.

ನಾಡಿನ ಜನರನ್ನು ತಪ್ಪು ದಾರಿಗೆ ಎಳೆದು ಅವರನ್ನು ವಂಚಿಸಲು ಬಿಜೆಪಿ ಅಪ್ಪಟ ಸುಳ್ಳುಗಳನ್ನು ಉತ್ಪಾದಿಸುತ್ತಿದೆ. ನಮ್ಮ ಸರ್ಕಾರದಲ್ಲಿ ಹಣ ಇಲ್ಲ ಎಂದು ಬಿಜೆಪಿಯವರು ಸುಳ್ಳುಗಳನ್ನು ಉತ್ಪಾದಿಸುತ್ತಾ ಅಲೆಯುತ್ತಿದ್ದಾರೆ. ಹಣ ಇಲ್ಲದೆ ಗ್ಯಾರಂಟಿ ಯೋಜನೆಗಳು, ಇಷ್ಟೆಲ್ಲಾ ಅಭಿವೃದ್ಧಿ ಕಾರ್ಯಗಳು ಹೇಗೆ ನಡೆಯಲು ಹೇಗೆ ಸಾಧ್ಯ?

ಒಂದೇ ದಿನ 227 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮಾಡಿದ್ದೇವೆ. ಅಪ್ಪಾಜಿ ನಾಡಗೌಡರು ಅತ್ಯಂತ ಹಿರಿಯ, ಸಭ್ಯ ರಾಜಕಾರಣಿ. ಅವರಿಗೆ ಸಚಿವರಾಗುವ ಅರ್ಹತೆ, ಅನುಭವ ಎರಡೂ ಇದೆ. ನಾಡಗೌಡರ ಕಾರಣದಿಂದ ಮುದ್ದೇಬಿಹಾಳ ಅಭಿವೃದ್ಧಿ ಪಥದಲ್ಲಿ ಮುನ್ನುಗ್ಗುತ್ತಿದೆ.

ಮಾರ್ಚ್ 20 ರಂದು ನಾನು ಮುದ್ದೇಬಿಹಾಳ ಚುನಾವಣಾ ಪ್ರಚಾರಕ್ಕೆ ಬಂದಿದ್ದೆ. ಅವತ್ತು ನಾನು ಮುದ್ದೇಬಿಹಾಳದಲ್ಲಿ ಕೊಟ್ಟ ಮಾತಿನಂತೆ ಎಲ್ಲಾ ಗ್ಯಾರಂಟಿಗಳನ್ನೂ ಜಾರಿ ಮಾಡಿ ನುಡಿದಂತೆ ನಡೆದಿದ್ದೇನೆ. ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೂ ನಾನು ಕೊಟ್ಟಿದ್ದ ಎಲ್ಲಾ ಭರವಸೆಗಳನ್ನೂ ಈಡೇರಿಸಿ ನುಡಿದಂತೆ ನಡೆದಿದ್ದೆ, ಈಗಲೂ ಅಷ್ಟೆ. ಬಸವಾದಿ ಶರಣರು ನುಡಿದಂತೆ ನಡೆದರು. ನಾವೂ ಬಸವಾದಿ ಶರಣರ ಮಾರ್ಗದಲ್ಲಿ ನಡೆಯುತ್ತಿದ್ದೇವೆ.ಶರಣ ಶ್ರೇಷ್ಠ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದರಿಂದ ಮುಖ್ಯಮಂತ್ರಿಗಳನ್ನು 12 ಮಂದಿ ಶರಣ ಸ್ವಾಮೀಜಿಗಳು ವೇದಿಕೆಯಲ್ಲಿ ಸನ್ಮಾನಿಸಿ ಆಶೀರ್ವದಿಸಿದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...