alex Certify BIG NEWS: 3 ದಿನ 30 ಜಿಲ್ಲೆಗಳಲ್ಲಿ ಬಿಜೆಪಿ ಜನಸೇವಕ ಸಮಾವೇಶ –ಸಮಾರೋಪದಲ್ಲಿ ಅಮಿತ್ ಶಾ ಭಾಗಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 3 ದಿನ 30 ಜಿಲ್ಲೆಗಳಲ್ಲಿ ಬಿಜೆಪಿ ಜನಸೇವಕ ಸಮಾವೇಶ –ಸಮಾರೋಪದಲ್ಲಿ ಅಮಿತ್ ಶಾ ಭಾಗಿ

ಶಿವಮೊಗ್ಗ: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ 30 ಜಿಲ್ಲೆಗಳಲ್ಲಿ ಜನಸೇವಕ ಸಮಾವೇಶವನ್ನು ಜನವರಿ 11 ರಿಂದ 13 ರವರೆಗೆ ಹಮ್ಮಿಕೊಳ್ಳಲಾಗುವುದು. ಬೆಂಗಳೂರಿನಲ್ಲಿ ಸಮಾರೋಪ ಸಮಾರಂಭ ಜನವರಿ 16 ಅಥವಾ 17 ರಂದು ನಡೆಯಲಿದೆ.

ಪಕ್ಷದ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸುವ ನಿರೀಕ್ಷೆ ಇದೆ ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಟೆಂಗಿನಕಾಯಿ ಮತ್ತು ರಾಜ್ಯ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ತಿಳಿಸಿದ್ದಾರೆ.

ಶಿವಮೊಗ್ಗದ ಪೆಸಿಟ್ ಕಾಲೇಜಿನ ಆವರದಲ್ಲಿ ಕಾರ್ಯಕಾರಿಣಿಯ ವಿಶೇಷ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ಸಚಿವರಾದ ಆರ್.ಅಶೋಕ್, ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪಸಿಂಹ, ರಾಜ್ಯ ಉಪಾಧ್ಯಕ್ಷ ಎಂ.ರಾಘವೇಂದ್ರ, ಎಸ್‍.ಟಿ. ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಸಂಚಾಲಕರಾಗಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ್ ಅವರುಳ್ಳ ತಂಡವು 11 ರಂದು ಮೈಸೂರು, ಚಾಮರಾಜನಗರ, 12 ರಂದು ಹಾಸನ ಮತ್ತು ಮಂಡ್ಯ, 13 ರಂದು ರಾಮನಗರ ಮತ್ತು ಬೆ.ಗ್ರಾಮಾಂತರ ಜಿಲ್ಲೆಗಳಲ್ಲಿ ಸಮಾವೇಶ ನಡೆಸಲಿದೆ ಎಂದು ವಿವರಿಸಿದರು.

ಎರಡನೇ ತಂಡದ ನೇತೃತ್ವವನ್ನು ಸಚಿವ ಕೆ.ಎಸ್.ಈಶ್ವರಪ್ಪ ಅವರು ವಹಿಸುವರು. ಈ ತಂಡದಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಉಪಾಧ್ಯಕ್ಷ ಅರವಿಂದ ಲಿಂಬಾವಳಿ, ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಸಂಚಾಲಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಜ. 11 ರಂದು ಚಿಕ್ಕಮಗಳೂರು ಮತ್ತು ಉಡುಪಿ, 12 ರಂದು ಮಡಿಕೇರಿ ಮತ್ತು ಮಂಗಳೂರು, 13 ರಂದು ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಈ ತಂಡ ಪ್ರವಾಸ ಮಾಡಲಿದೆ ಎಂದು ತಿಳಿಸಿದರು.

ಮೂರನೇ ತಂಡದ ನೇತೃತ್ವವನ್ನು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ವಹಿಸುವರು. ಸಚಿವರಾದ ವಿ.ಸೋಮಣ್ಣ, ರಮೇಶ್ ಜಾರಕಿಹೊಳಿ, ರಾಜ್ಯ ಎಸ್‍ಟಿ ಮೋರ್ಚಾ ಅಧ್ಯಕ್ಷ ತಿಪ್ಪರಾಜು ಹವಾಲ್ದಾರ್, ರಾಜ್ಯ ಉಪಾಧ್ಯಕ್ಷರಾದ ತೇಜಸ್ವಿನಿ ಅನಂತಕುಮಾರ್ ಇರುವ ಈ ತಂಡದ ಸಂಚಾಲಕರಾಗಿ ರಾಜ್ಯ ಕಾರ್ಯದರ್ಶಿಗಳಾದ ಶ್ರೀ ತುಳಸಿ ಮುನಿರಾಜು ಅವರು ಕಾರ್ಯ ನಿರ್ವಹಿಸುವರು. ಈ ತಂಡವು 11 ರಂದು ಬೆಳಗಾವಿ, ಚಿಕ್ಕೋಡಿ, 12 ರಂದು ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆ, 13 ರಂದು ಗದಗ್ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದೆ.

ನಾಲ್ಕನೇ ತಂಡದ ನೇತೃತ್ವವನ್ನು ಸಚಿವ ಜಗದೀಶ ಶೆಟ್ಟರ್ ವಹಿಸಲಿದ್ದು, ತಂಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ಸಚಿವರಾದ ಶಶಿಕಲಾ ಜೊಲ್ಲೆ, ಪ್ರಭು ಚವ್ಹಾಣ್, ರಾಜ್ಯ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ್, ಯುವ ಮೋರ್ಚಾ ರಾಜ್ಯ ಅಧ್ಯಕ್ಷರಾದ ಡಾ.ಸಂದೀಪ್ ಇರುವರು. ಈ ತಂಡದ ಸಂಚಾಲಕರಾಗಿ ಮಹೇಶ್ ಟೆಂಗಿನಕಾಯಿ ಭಾಗವಹಿಸಲಿದ್ದಾರೆ. ಜ 11 ರಂದು ಬೀದರ್ ಮತ್ತು ಕಲಬುರ್ಗಿ, 12 ರಂದು ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ, 13 ರಂದು ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಈ ತಂಡ ಪ್ರವಾಸ ಮಾಡಲಿದೆ.

ರಾಜ್ಯದ ಉಪ ಮುಖ್ಯಮಂತ್ರಿಡಾ.ಅಶ್ವತ್ಥನಾರಾಯಣ ಅವರ ನೇತೃತ್ವದ ಇನ್ನೊಂದು ತಂಡದಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವರಾದ ಬಿ.ಶ್ರೀರಾಮುಲು, ಬಸವರಾಜ ಬೊಮ್ಮಾಯಿ, ರಾಜ್ಯದ ಉಪಾಧ್ಯಕ್ಷರಾದ ಶೋಭಾ ಕರಂದ್ಲಾಜೆ, ಸಂಸದ ಶಿವಕುಮಾರ್ ಉದಾಸಿ, ಮಹಿಳಾ ಮೋರ್ಚಾದ ರಾಜ್ಯಾಧ್ಯಕ್ಷೆ ಗೀತಾ ವಿವೇಕಾನಂದ ಇರಲಿದ್ದು, ಕಾರ್ಯಕ್ರಮದ ಸಂಚಾಲಕರಾಗಿ ರಾಜ್ಯ ಕಾರ್ಯದರ್ಶಿ ನವೀನ್ ಇರುವರು. ಈ ತಂಡವು ಜ. 11 ರಂದು ಹಾವೇರಿ ಮತ್ತು ದಾವಣಗೆರೆ ಜಿಲ್ಲೆ, 12 ರಂದು ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆ, 13 ರಂದು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಮಾವೇಶ ಏರ್ಪಡಿಸಲಿದೆ.

ಒಂದು ದೇಶ ಒಂದು ತೆರಿಗೆ, ಒಂದು ದೇಶ ಒಂದು ಪಡಿತರ ಚೀಟಿ ಅನುಷ್ಠಾನ ಆಗಿದೆ. ಒಂದು ದೇಶ ಒಂದೇ ಚುನಾವಣೆ ಕುರಿತ ಚರ್ಚೆ ವ್ಯಾಪಕವಾಗಿ ಆಗಬೇಕು. ಇದರಿಂದ ಸಂಪನ್ಮೂಲದ ಸದ್ಬಳಕೆ ಮತ್ತು ಅಭಿವೃದ್ಧಿ ಕಾರ್ಯ ಇನ್ನಷ್ಟು ವೇಗದಿಂದ ನಡೆಯಲು ಸಾಧ್ಯವಿದೆ. ಇದರ ಸಾಧಕ ಬಾಧಕಗಳ ಕುರಿತು ಚರ್ಚೆ ಅಗತ್ಯವಿದೆ ಎಂದು ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ವಿಭಾಗ ಪ್ರಭಾರಿ ಗಿರೀಶ್ ಪಟೇಲ್, ರಾಜ್ಯ ಮಾಧ್ಯಮ ವಿಭಾಗದ ಸಂಚಾಲಕರಾದ ಕರುಣಾಕರ ಖಾಸಲೆ, ಸದಸ್ಯರಾದ ಅವಿನಾಶ್, ಜಿಲ್ಲಾ ಮಾಧ್ಯಮ ಪ್ರಮುಖ್ ಅಣ್ಣಪ್ಪ ಅವರು ಉಪಸ್ಥಿತರಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...