ಬೆಂಗಳೂರು : ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಫಿಕ್ಸ್ ಆದಂತೆ ಆಗಿದ್ದು, ಈ ಬಗ್ಗೆ ಸೆ.15 ರೊಳಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ.
ಈ ಸಂಬಂಧ ಜೆಡಿಎಸ್ ನಾಳೆ ಸಭೆ ನಡೆಸಲಿದ್ದು, ಬಳಿಕ ಹೆಚ್ಡಿಕೆ ದೆಹಲಿಗೆ ಹೋಗಲಿದ್ದಾರೆ.ಹೌದು, ಹೆಚ್ಡಿಕೆ ಶೀಘ್ರದಲ್ಲೇ ದೆಹಲಿಗೆ ತೆರಳಿ ಬಿಜೆಪಿ ರಾಷ್ಟ್ರೀಯ ನಾಯಕರ ಜೊತೆ ಅಂತಿಮ ಹಂತದ ಮಾತುಕತೆ ನಡೆಸಲಿದ್ದಾರೆ. ಕುಮಾರಸ್ವಾಮಿ ಅವರ ಜೊತೆ ದೇವೇಗೌಡರೂ ಕೂಡ ತೆರಳಲಿದ್ದಾರೆ ಎಂದು ಹೇಳಲಾಗಿದೆ.
ಕೆಲವು ತಿಂಗಳ ಹಿಂದೆ ಕುಮಾರಸ್ವಾಮಿ ಅವರು ದೆಹಲಿಗೆ ತೆರಳಿದ್ದ ವೇಳೆ ಗೃಹ ಸಚಿವ ಅಮುತ್ ಶಾ ಅವರನ್ನು ಭೇಟಿಯಾಗಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಕುರಿತು ಮಾತನಾಡಿದ್ದರು.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಜೆಡಿಎಸ್ ಮೈತ್ರಿ ಬಗ್ಗೆ ನಮಗೆ ಯಾವುದೇ ಚಿಂತೆ ಇಲ್ಲ, ತಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಪಕ್ಷಗಳ ಮೈತ್ರಿಯಿಂದ ಕಾಂಗ್ರೆಸ್ ಗೆ ಹೆಚ್ಚು ಅನುಕೂಲವಾಗಲಿದೆ ಎಂದರು.
ಮೈತ್ರಿ ಬಗ್ಗೆ ಇತ್ತೀಚೆಗೆ ಬರೀ ಊಹಾಪೂಹಗಳು ಕೇಳಿವಬಂದಿದ್ದವು. ಆದರೆ ಇದೀಗ ಬಿಜೆಪಿ ನಾಯಕರೇ ಮೈತ್ರಿ ಬಗ್ಗೆ ಬಹಿರಂಗವಾದ ಹೇಳಿಕೆ ನೀಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆ, ಇದಕ್ಕೆ ಅಮಿತ್ ಶಾ ಕೂಡ ಒಪ್ಪಿಗೆ ನೀಡಿದ್ದಾರೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.