alex Certify BIG BREAKING : ಲೋಕಸಭೆ ಚುನಾವಣೆಗೆ `ಬಿಜೆಪಿ-ಜೆಡಿಎಸ್’ ಮೈತ್ರಿ : ಮಾಜಿ ಸಿಎಂ ಬೊಮ್ಮಾಯಿ ಮಹತ್ವದ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING : ಲೋಕಸಭೆ ಚುನಾವಣೆಗೆ `ಬಿಜೆಪಿ-ಜೆಡಿಎಸ್’ ಮೈತ್ರಿ : ಮಾಜಿ ಸಿಎಂ ಬೊಮ್ಮಾಯಿ ಮಹತ್ವದ ಹೇಳಿಕೆ

ಹುಬ್ಬಳ್ಳಿ : ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದ ಕುರಿತಂತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಹತ್ವದ ಹೇಳಿಕೆ ನೀಡಿದ್ದು, ಈಗಾಗಲೇ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಜೊತೆಗೆ ಮಾತುಕತೆ ನಡೆದಿದೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ವರಿಷ್ಠರು ನಿರ್ಧರಿಸುತ್ತಾರೆ. ನಮ್ಮ ವರಿಷ್ಠರು ಮತ್ತು ದೇವೇಗೌಡರ ಜೊತೆಗೆ ಮಾತುಕತೆ ನಡೆದಿದೆ.ಈಗಾಗಲೇ ಹೆಚ್.ಡಿ.ದೇವೇಗೌಡರು ಕೆಲವೊಂದು ಭಾವನೆ ವ್ಯಕ್ತಪಡಿಸಿದ್ದಾರೆ. ಮಾತುಕತೆ ಮೇಲೆ ಮುಂದಿನ ರಾಜಕೀಯ ಬೆಳವಣಿಗೆ ಆಗುತ್ತದೆ ಎಂದರು.

ವಿರೋಧ ಪಕ್ಷದ ನಾಯಕನ ಆಯ್ಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಜುಲೈ 18 ರಬಳಿಕ ವಿಪಕ್ಷ ನಾಯಕರ ಘೋಷಣೆ ಆಗುವ ಸಾಧ್ಯತೆ ಇದೆ. ಮಾಜಿ ಸಚಿವ ವಿ.ಸೋಮಣ್ಣ ಅವರು ಕಾಂಗ್ರೆಸ್ ಸೇರ್ಪಡೆ ಊಹಾಪೋಹ ಎಂದು ಸ್ಪಷ್ಟನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...