alex Certify BJP – JDS ಮೈತ್ರಿ: ಅಧಿಕೃತ ಘೋಷಣೆಗೂ ಮುನ್ನವೇ ಶಾಸಕರುಗಳ ಅಸಮಾಧಾನ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BJP – JDS ಮೈತ್ರಿ: ಅಧಿಕೃತ ಘೋಷಣೆಗೂ ಮುನ್ನವೇ ಶಾಸಕರುಗಳ ಅಸಮಾಧಾನ…!

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷವನ್ನು ಮಣಿಸಲು ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳಲು ಮುಂದಾಗಿದೆ ಎಂದು ಹೇಳಲಾಗಿದ್ದು, ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈಗಾಗಲೇ ಈ ಕುರಿತು ಸುಳಿವು ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ನಾಲ್ಕು ಸ್ಥಾನಗಳನ್ನು ಬಿಟ್ಟು ಕೊಡಲಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಬಿಜೆಪಿ ಜೊತೆಗಿನ ಮೈತ್ರಿ ವಿಚಾರ ಕುರಿತಂತೆ ಚರ್ಚೆ ನಡೆಸಲು ಇಂದು ಜೆಡಿಎಸ್ ನಾಯಕರು ಮಹತ್ವದ ಸಭೆ ಕರೆದಿದ್ದು, ಈ ಸಭೆಯಲ್ಲಿ ಶಾಸಕರುಗಳು ಭಾಗವಹಿಸಲಿದ್ದಾರೆ. ಆದರೆ ಇದಕ್ಕೂ ಮುನ್ನವೇ ಕೆಲ ಶಾಸಕರು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲು ಪರೋಕ್ಷವಾಗಿ ತಮ್ಮ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎನ್ನಲಾಗಿದೆ. ಈ ಮೈತ್ರಿ ಮಾಡಿಕೊಂಡರೆ ಮುಂದಿನ ದಿನಗಳಲ್ಲಿ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಹಿನ್ನಡೆಯಾಗಬಹುದು ಎಂಬ ಆತಂಕ ಈ ಶಾಸಕರುಗಳನ್ನು ಕಾಡುತ್ತಿದೆ ಎಂದು ಹೇಳಲಾಗಿದೆ.

ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಸ್ವಂತ ಶಕ್ತಿಯ ಮೇಲೆ ‘ಅಹಿಂದ’ ಮತಗಳನ್ನು ತಾವುಗಳು ಸೆಳೆದಿದ್ದು, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡರೆ ಇದು ಕೈ ತಪ್ಪಬಹುದು ಎಂಬ ಕಾರಣಕ್ಕೆ ಈ ಶಾಸಕರುಗಳು ಮೈತ್ರಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ನೇತೃತ್ವದಲ್ಲಿ ಇಂದು ನಡೆಯಲಿರುವ ಮಹತ್ವದ ಸಭೆಯಲ್ಲಿ ಈ ಎಲ್ಲ ವಿಚಾರಗಳು ಸಹ ಚರ್ಚೆಗೆ ಬರಲಿದ್ದು, ಅಂತಿಮವಾಗಿ ಯಾವ ತೀರ್ಮಾನ ಹೊರ ಬೀಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...