alex Certify ಬಿಜೆಪಿ- ಜೆಡಿಎಸ್ ಮೈತ್ರಿ: ಕುತೂಹಲ ಮೂಡಿಸಿದ ದೇವೇಗೌಡರ ಸುದ್ದಿಗೋಷ್ಠಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ- ಜೆಡಿಎಸ್ ಮೈತ್ರಿ: ಕುತೂಹಲ ಮೂಡಿಸಿದ ದೇವೇಗೌಡರ ಸುದ್ದಿಗೋಷ್ಠಿ

ನವದೆಹಲಿ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸಫ್ದರ್ ಜಂಗ ಲೇನ್ ನಲ್ಲಿರುವ ನಿವಾಸದಲ್ಲಿ ದೇವೇಗೌಡರು ಸುದ್ದಿಗೋಷ್ಠಿ ನಡೆಸಲಿದ್ದು, ಬಿಜೆಪಿ -ಜೆಡಿಎಸ್ ಮೈತ್ರಿ ಕುರಿತಾಗಿ ಮಾಹಿತಿ ಹಂಚಿಕೊಳ್ಳುವ ಸಾಧ್ಯತೆ ಇದೆ.

ದೆಹಲಿಯಲ್ಲಿ ಬೀಡುಬಿಟ್ಟಿರುವ ಜೆಡಿಎಸ್ ನಾಯಕರು ಬಿಜೆಪಿ ವರಿಷ್ಠರೊಂದಿಗೆ ಚರ್ಚೆ ನಡೆಸಿದ್ದಾರೆ. ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಲೋಕಸಭೆ ಚುನಾವಣೆಗೆ ಮೈತ್ರಿ ಬಗ್ಗೆ ಚರ್ಚೆ ನಡೆದಿದ್ದು, ಇಂದು ಪ್ರಧಾನಿ ಮೋದಿ ಅವರೊಂದಿಗೆ ಚರ್ಚೆ ನಡೆಸಿದ ಬಳಿಕ ಮೈತ್ರಿ ಕುರಿತಾಗಿ ಸ್ಪಷ್ಟ ನಿರ್ಧಾರ ಕೈಗೊಳ್ಳಲಿದ್ದಾರೆ. ಇಂದು ಬೆಳಿಗ್ಗೆ 9 ಗಂಟೆಗೆ ದೇವೇಗೌಡರು ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ಕರೆದಿದ್ದು, ಬಿಜೆಪಿ -ಜೆಡಿಎಸ್ ಮೈತ್ರಿಯ ಕುರಿತಾಗಿ ಕುತೂಹಲ ಮೂಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...