
ಬೆಂಗಳೂರು: ಜೆಡಿಎಸ್ ಪಕ್ಷ ಎನ್‌ಡಿಎ ಒಕ್ಕೂಟ ಸೇರ್ಪಡೆಯಾಗಿರುವುದು ಸ್ವಾಗತಾರ್ಹ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ಬಿಜೆಪಿ -ಜೆಡಿಎಸ್ ಮೈತ್ರಿಯಿಂದ ರಾಜ್ಯದಲ್ಲಿ ಗರಿಷ್ಠ ಸ್ಥಾನಗಳಲ್ಲಿ ಗೆಲ್ಲಬಹುದಾಗಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ನಿಶ್ಚಿತ ಎಂಬುದರ ಸಂಕೇತ ಇದು ಎಂದು ಕಟೀಲು ತಿಳಿಸಿದ್ದಾರೆ.
ನವದೆಹಲಿಯಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಎನ್.ಡಿ.ಎ. ಸೇರ್ಪಡೆಯಾಗಿದ್ದಾರೆ.